Home Uncategorized ಆಸ್ತಿ ವಿವಾದ: ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಆಸ್ತಿ ವಿವಾದ: ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

34
0

ಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿಯಲ್ಲಿ ನಡೆದಿದೆ. ಉತ್ತರ ಕನ್ನಡ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿಯಲ್ಲಿ ನಡೆದಿದೆ.

ಹತ್ಯೆಯಾದವರನ್ನು ಹಾಡವಳ್ಳಿ ನಿವಾಸಿ ಶಂಭು ಭಟ್(65), ಪತ್ನಿ ಮಾದೇವಿ ಭಟ್(40) ಮಗ ರಾಜೀವ್ ಭಟ್(34) ಸೊಸೆ ಕುಸುಮಾ ಭಟ್(30) ಎಂದು ಗುರುತಿಸಲಾಗಿದೆ.

ಇದನ್ನು ಓದಿ: ದೊಡ್ಡಬಳ್ಳಾಪುರ: ಕ್ರಿಕೆಟ್ ಟೂರ್ನಿ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಇಬ್ಬರಿಗೆ ಚೂರಿ ಇರಿದು ಬರ್ಬರ ಹತ್ಯೆ

ಒಂದೇ ಕುಟುಂಬದ ಈ ನಾಲ್ವರನ್ನು ಕತ್ತಿಯಲ್ಲಿ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. 

ಆಸ್ತಿ ವಿಚಾರಕ್ಕೆ ಈ  ಸಾಮೂಹಿಕ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಕೊಲೆ ಮಾಡಿದವರು ಯಾರು? ಹತ್ಯೆಗೆ ನಿಖಕರ ಕಾರಣ ಏನು? ಎನ್ನುವುದು ಇನ್ನೂ ತಿಳಿದುಬಂದಿಲ್ಲ. 

ವಿಷಯ ತಿಳಿದು ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here