Home Uncategorized ಆಸ್ಪತ್ರೆಯಿಂದ ಎಚ್.ಡಿ ದೇವೇಗೌಡ ಡಿಸ್ಚಾರ್ಜ್: ಮಾರ್ಚ್ 26 ರ ಪಂಚರತ್ನ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ!

ಆಸ್ಪತ್ರೆಯಿಂದ ಎಚ್.ಡಿ ದೇವೇಗೌಡ ಡಿಸ್ಚಾರ್ಜ್: ಮಾರ್ಚ್ 26 ರ ಪಂಚರತ್ನ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ!

19
0
Advertisement
bengaluru

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಮೊಣಕಾಲು ನೋವಿನ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಮೊಣಕಾಲು ನೋವಿನ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದೀಗ ಮೊಣಕಾಲು ನೋವು ಕಡಿಮೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಮೊಣಕಾಲು ನೋವಿಗೆ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಮಾಜಿ ಪ್ರಧಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಅವರು ಫೆಬ್ರವರಿ 28ರಂದು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಇದರಿಂದ ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ದೇವೇಗೌಡರು, ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಮಾಮೂಲಿ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಗಾಬರಿಗೊಳ್ಳುವ ಅಗತ್ಯವಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಮನೆಗೆ ಮರಳಲಿದ್ದೇನೆ ಎಂದಿದ್ದರು.

ಜೆಡಿಎಸ್‌ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಮಾರ್ಚ್‌ 26ರಂದು ನಡೆಯಲಿದ್ದು, ಆ ದಿನ ಕುಂಬಳಗೋಡಿನಿಂದ ಆರಂಭವಾಗುವ ರೋಡ್‌ಶೋದಲ್ಲಿ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಭಾಗವಹಿಸಲಿದ್ದಾರೆ.

bengaluru bengaluru

ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್‌ ಗೌಡ ಅವರು ನಗರದಲ್ಲಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು. ಮಂಡ್ಯ ಮತ್ತು ಮೈಸೂರು ನಡುವಿನ ಸ್ಥಳವೊಂದರಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ. ಸಮಾರೋಪದ ಸ್ಥಳದವರೆಗೂ ರೋಡ್‌ ಶೋ ನಡೆಸಲಿರುವ ದೇವೇಗೌಡರು, ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ’ ಎಂದರು.


bengaluru

LEAVE A REPLY

Please enter your comment!
Please enter your name here