Home Uncategorized ಆಹಾರ ಪದಾರ್ಥಗಳ ಬೆಲೆ ಶೇಕಡಾ 15-25 ರಷ್ಟು ಹೆಚ್ಚಿಸಲು ಹೋಟೆಲ್ ಮಾಲೀಕರ ಮುಂದು!

ಆಹಾರ ಪದಾರ್ಥಗಳ ಬೆಲೆ ಶೇಕಡಾ 15-25 ರಷ್ಟು ಹೆಚ್ಚಿಸಲು ಹೋಟೆಲ್ ಮಾಲೀಕರ ಮುಂದು!

15
0

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ ಗಳ ಮಾಲೀಕರು ಆಹಾರ ತಿನಿಸುಗಳ ಬೆಲೆಯಲ್ಲಿ ಶೇ.15-25ರಷ್ಟು ಹೆಚ್ಚಳ ಮಾಡಲು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ ಗಳ ಮಾಲೀಕರು ಆಹಾರ ತಿನಿಸುಗಳ ಬೆಲೆಯಲ್ಲಿ ಶೇ.15-25ರಷ್ಟು ಹೆಚ್ಚಳ ಮಾಡಲು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಬೇಳೆಕಾಳುಗಳು, ತರಕಾರಿಗಳು, ಸಾಂಬಾರು ಪದಾರ್ಥಗಳು ಮತ್ತು ಇತರ ಸರಕುಗಳ ಬೆಲೆಗಳಲ್ಲಿ ತೀವ್ರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಪದಾರ್ಥಗಳ ಬೆಲೆಯಲ್ಲಿಯೂ ಏರಿಕೆ ಮಾಡಲು ಚಿಂತನೆ ನಡೆಸಲು ಮುಂದಾಗಿದ್ದಾರೆ.

ಬೇಳೆಕಾಳು, ತರಕಾರಿ ಬೆಲೆ ಏರಿಕೆ ಮಾತ್ರವಲ್ಲ, ಹಾಲಿನ ದರ 5 ರೂಗಳಷ್ಟು ಹೆಚ್ಚಳ ಮಾಡಲು ಸರ್ಕಾರ ಚಿಂತನೆ ನಡೆಸಿರುವುದು ಹಾಗೂ ವಿದ್ಯುತ್, ನೀರಿನ ದರಗಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರನ್ನು ತಮ್ಮ ದರ ಪಟ್ಟಿಯನ್ನು ಮರುಪರಿಶೀಲಿಸಲು ಮುಂದಾಗಿದ್ದಾರೆನ್ನಲಾಗಿದೆ.

ಆಹಾರ ಧಾನ್ಯಗಳು, ಪದಾರ್ಥಗಳು, ತರಕಾರಿಗಳ ಸೇರಿದಂತೆ ಇನ್ನಿತರೆ ಬೆಲೆಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನಗರದ ಹಲವು ಹೋಟೆಲ್ ಮಾಲೀಕರು ಈಗಾಗಲೇ ಹಲವೆಡೆ ತಿಂಡಿ, ತಿನಿಸುಗಳ ಬೆಲೆಯಲ್ಲಿ ಶೇ.5-10ರಷ್ಟು ಏರಿಕೆ ಮಾಡಿದ್ದಾರೆಂದು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ ಅಧ್ಯಕ್ಷ ಪಿಸಿ ರಾವ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here