ಮಂಗಳೂರು: ಆ್ಯಸಿಡ್ ದಾಳಿಗೆ ಒಳಗಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಡಬದ ವಿದ್ಯಾರ್ಥಿಗಳನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.
ಮೂವರು ವಿದ್ಯಾರ್ಥಿನಿಯರ ಪೈಕಿ ಒಬ್ಬಳಿಗೆ ತೀವ್ರಗಾಯವಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಉತ್ತಮವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇಲಾಖೆಯು ಕೂಡಾ ಅವರ ಅಗತ್ಯದ ಸಹಾಕಾರ ನೀಡುತ್ತಿದೆ ಎಂದು ಹೇಳಿದರು.
