Home Uncategorized ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ: ಗ್ಯಾರಂಟಿ ಯೋಜನೆ ಕುರಿತು ಸರ್ಕಾರ-ಬಿಜೆಪಿ ನಡುವೆ ಭಾರೀ ವಾಗ್ಯುದ್ಧ...

ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ: ಗ್ಯಾರಂಟಿ ಯೋಜನೆ ಕುರಿತು ಸರ್ಕಾರ-ಬಿಜೆಪಿ ನಡುವೆ ಭಾರೀ ವಾಗ್ಯುದ್ಧ ನಿರೀಕ್ಷೆ

21
0

ಇಂದಿನಿಂದ ವಿಧಾನಮಂಡಲ​​​ ಅಧಿವೇಶನ ಆರಂಭವಾಗಲಿದ್ದು ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್​ ಮಂಡನೆ ಮಾಡಲಿದ್ದಾರೆ. ಬೆಂಗಳೂರು: ಇಂದಿನಿಂದ ವಿಧಾನಮಂಡಲ​​​ ಅಧಿವೇಶನ ಆರಂಭವಾಗಲಿದ್ದು ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್​ ಮಂಡನೆ ಮಾಡಲಿದ್ದಾರೆ.

16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದ್ದು ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ಮತಾಂತರ ನಿಷೇಧ ಕಾಯ್ದೆ ಸೇರಿದಂತೆ ಹಲವು ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವ ವಿಚಾರ ಹಾಗೂ ಇತರೆ ಹಲವು ವಿಷಯಗಳ ಬಗ್ಗೆ​​ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದನದಲ್ಲಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಿದ್ಧತೆ ಮಾಡಿಕೊಂಡಿದ್ದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಕಾಂಗ್ರೆಸ್ ಸಜ್ಜಾಗಿದೆ.

LEAVE A REPLY

Please enter your comment!
Please enter your name here