Home Uncategorized ಇಂದು ಈ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಇರುವುದಿಲ್ಲ: ಯಾವುದದು, ಇಲ್ಲಿದೆ ಮಾಹಿತಿ…

ಇಂದು ಈ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಇರುವುದಿಲ್ಲ: ಯಾವುದದು, ಇಲ್ಲಿದೆ ಮಾಹಿತಿ…

41
0

ನಮ್ಮ ಮೆಟ್ರೊದ ಕೆ.ಆರ್‌.ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸುರಕ್ಷತಾ ಆಯುಕ್ತರು ಇಂದು ಗುರುವಾರ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೃಷ್ಣರಾಜಪುರ ಮತ್ತು ಗರುಡಾಚಾರ್‌ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್‌ಸಿಎಲ್‌ ಸ್ಥಗಿತಗೊಳಿಸಿದೆ.  ಬೆಂಗಳೂರು: ನಮ್ಮ ಮೆಟ್ರೊದ ಕೆ.ಆರ್‌.ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸುರಕ್ಷತಾ ಆಯುಕ್ತರು ಇಂದು ಗುರುವಾರ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೃಷ್ಣರಾಜಪುರ ಮತ್ತು ಗರುಡಾಚಾರ್‌ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್‌ಸಿಎಲ್‌ ಸ್ಥಗಿತಗೊಳಿಸಿದೆ. 

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಕೃಷ್ಣರಾಜಪುರ ಮತ್ತು ಗರುಡಾಚಾರ್‌ಪಾಳ್ಯದವರೆಗೆ ಇಡೀ ದಿನ ಮೆಟ್ರೋ ರೈಲು ಸಂಚಾರ ಸೇವೆ ಇರುವುದಿಲ್ಲ. ಬೈಯ್ಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲು ಸಂಚರಿಸುವುದಿಲ್ಲ ಎಂದು ತಿಳಿಸಿದೆ.

ಇನ್ನು ವೈಟ್‌ಫೀಲ್ಡ್‌ ಮತ್ತು ಗರುಡಾಚಾರಪಾಳ್ಯ ನಡುವೆ ರೈಲು ಸೇವೆ ಎಂದಿನಂತೆ ಇರಲಿದೆ. ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲ್ವೆ ಸೇವೆ ಲಭ್ಯವಿದೆ. ಮಧ್ಯಾಹ್ನ 1.30ರವರೆಗೆ ಮತ್ತು ಸಂಜೆ 4.30ರ ಬಳಿಕ ಬೈಯ್ಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ರಾತ್ರಿ 11ರವರೆ ಮೆಟ್ರೋ ಸೇವೆ ಎಂದಿನಂತೆ ನಡೆಯಲಿದೆ. ಮೆಟ್ರೋ ಪ್ರಯಾಣಿಕರು ರೈಲ್ವೆ ಸಂಚಾರದ ವ್ಯತ್ಯಯ ಗಮನಿಸಿ ಸಹಕರಿಸುವಂತೆ ಬಿಎಂಆರ್‌ಸಿಎಲ್‌ ಕೋರಿದೆ.

In view of the Statutory Safety Inspection by Commissioner of Metro Railway Safety (Southern Circle)on 21.09.2023 , there will be changes to the Metro Train Operations. May kindly note and cooperate. Details are in the media release. pic.twitter.com/0K0a5pzkBS
— ನಮ್ಮ ಮೆಟ್ರೋ (@cpronammametro) September 19, 2023

LEAVE A REPLY

Please enter your comment!
Please enter your name here