Home Uncategorized ಇಂದು CWRC ಸಭೆ: ಈ ಬಾರಿ ತಮಿಳುನಾಡು ಬೇಡಿಕೆಯಿಟ್ಟ ನೀರಿನ ಪ್ರಮಾಣ ಎಷ್ಟು ಗೊತ್ತಾ?

ಇಂದು CWRC ಸಭೆ: ಈ ಬಾರಿ ತಮಿಳುನಾಡು ಬೇಡಿಕೆಯಿಟ್ಟ ನೀರಿನ ಪ್ರಮಾಣ ಎಷ್ಟು ಗೊತ್ತಾ?

47
0

ನವದೆಹಲಿ: ಕಾವೇರಿ ನದಿ ನೀರು (Cauvery River Water) ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆ ನಡೆಯಲಿದೆ‌. ಸಮಿತಿ ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ 88ನೇ ಸಭೆ ಕರೆಯಲಾಗಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳು ವರ್ಚ್ಯುವಲ್ ಮೂಲಕ ಭಾಗಿಯಾಗಲಿದ್ದಾರೆ.

ಅಕ್ಟೋಬರ್‌ 15ರ ವರೆಗೆ ಪ್ರತಿ ನಿತ್ಯ 3,000 ಕ್ಯೂಸೆಕ್‌ ಕಾವೇರಿ ನೀರನ್ನು ತಮಿಳುನಾಡಿಗೆ (Tamil Nadu) ಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆಪ್ಟೆಂಬರ್‌ 29 ರಂದು ಆದೇಶಿಸಿತ್ತು. ಈ ಆದೇಶ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸುವ ಮೂಲಕ ನೀರಿ ಹರಿವು ಸರಿಯಾಗಿದೆಯೇ? ಅಣೆಕಟ್ಟುಗಳಲ್ಲಿ ಎಷ್ಟು ಪ್ರಮಾಣದ ನೀರಿನ ಸಂಗ್ರಹ ಇದೆ?,

Iphone 15 Bigg Update: ಐಫೋನ್ 15 ಸೀರೀಸ್ ಬಳಕೆದಾರರಿಗೆ ಬಿಗ್‌ ಅಪೆ ಡೇಟ್:‌ ಏನಂತೀರಾ?!

 ಜೊತೆಗೆ ಒಳ ಹರಿವು ಗಮನಿಸಿಕೊಂಡು ಮುಂದಿನ ಹಂತದಲ್ಲಿ ಹೊಸ ಆದೇಶ ನೀಡುವ ಸಾಧ್ಯತೆಗಳಿವೆ. ತಮಿಳುನಾಡು ಸರ್ಕಾರದ (Tamil Nadu Government) ಪರವಾಗಿ ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ, ಮುಖ್ಯ ಎಂಜಿನಿಯರ್ ಸುಬ್ರಮಣ್ಯಂ ಮತ್ತು ಪಟ್ಟಾಭಿ ರಾಮನ್ ಭಾಗವಹಿಸಲಿದ್ದಾರೆ. ಇಂದಿನ ಸಭೆಯಲ್ಲಿ ತಮಿಳುನಾಡು ನಿತ್ಯ 13,000 ಕ್ಯೂಸೆಕ್ ನೀರು 15 ದಿನಗಳ ಕಾಲ ನೀರು ಬಿಡುವಂತೆ ಮನವಿ ಮಾಡಲು ನಿರ್ಧರಿಸಿದೆ.

The post ಇಂದು CWRC ಸಭೆ: ಈ ಬಾರಿ ತಮಿಳುನಾಡು ಬೇಡಿಕೆಯಿಟ್ಟ ನೀರಿನ ಪ್ರಮಾಣ ಎಷ್ಟು ಗೊತ್ತಾ? appeared first on Ain Live News.

LEAVE A REPLY

Please enter your comment!
Please enter your name here