Home Uncategorized ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ: ಗೃಹ ಸಚಿವ ಪರಮೇಶ್ವರ್

ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ: ಗೃಹ ಸಚಿವ ಪರಮೇಶ್ವರ್

36
0

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 15 ಸಾವಿರ ಪೊಲೀಸರ ಹುದ್ದೆ ಖಾಲಿ ಇದ್ದು,  ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ತಿಳಿಸಿದ್ದಾರೆ. ತುಮಕೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 15 ಸಾವಿರ ಪೊಲೀಸರ ಹುದ್ದೆ ಖಾಲಿ ಇದ್ದು,  ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ತಿಳಿಸಿದ್ದಾರೆ.

ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ಇದನ್ನು ಓದಿ: ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರ

ಇನ್ನು ಸ್ಮಾರ್ಟ್​​ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಕೇಂದ್ರದಿಂದ ಶೇ.50, ರಾಜ್ಯ ಸರ್ಕಾರದಿಂದ ಶೇ.50ರಷ್ಟು ಅನುದಾನ ನೀಡಿದ್ದು, ಈಗಾಗಲೇ ಕೇಂದ್ರ ಸರ್ಕಾರ ಶೇ.45ರಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದರು.

ಸ್ಮಾರ್ಟ್​​​ಸಿಟಿ ಯೋಜನೆಯಡಿ 170 ಕಾಮಗಾರಿ ನಡೆಯುತ್ತಿವೆ. ನವೆಂಬರ್​​ ನೊಳಗೆ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇನೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here