Home Uncategorized ಈ ವರ್ಷದ ಏಷ್ಯನ್‌ ಗೇಮ್ಸ್‌ಗೆ ಬಿತ್ತು ತೆರೆ: 2027ಕ್ಕೆ ಎಲ್ಲಿ ನಡೆಯುತ್ತೆ ಗೊತ್ತಾ?

ಈ ವರ್ಷದ ಏಷ್ಯನ್‌ ಗೇಮ್ಸ್‌ಗೆ ಬಿತ್ತು ತೆರೆ: 2027ಕ್ಕೆ ಎಲ್ಲಿ ನಡೆಯುತ್ತೆ ಗೊತ್ತಾ?

39
0

ಚೀನಾದ‌ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಆವೃತ್ತಿಯ ಏಷ್ಯನ್‌ ಗೇಮ್ಸ್‌ಗೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿದ್ದು, ಭಾರತ ಅದ್ಭುತ ಸಾಧನೆಯೊಂದಿಗೆ ವಿದಾಯ ಹೇಳಿದೆ.

ಏಷ್ಯನ್‌ ಗೇಮ್ಸ್‌ನ ಧ್ವಜವನ್ನು ಮುಂದಿನ ಅತಿಥೇಯ ನಗರವಾದ ದೋಹಾ, ಕತಾರ್‌ಗೆ ಹಸ್ತಾಂತರಿಸುವ ನಿರೀಕ್ಷೆಯಿದ್ದು, 2027ಕ್ಕೆ ದೋಹಾದಲ್ಲಿ ಏಷ್ಯನ್‌ ಗೇಮ್ಸ್‌ ನಡೆಯಲಿದೆ. ಏಷ್ಯನ್‌ ಗೇಮ್ಸ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪದಕಗಳ ಬೇಟೆಯಲ್ಲಿ ಭಾರತ ಶತಕ ಬಾರಿಸಿದೆ.

ಕ್ರೀಡಾಕೂಟ ಆರಂಭವಾದ ದಿನದಿಂದ ಇಲ್ಲಿಯವರೆಗೆ ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಚಿನ್ನ, ಬೆಳ್ಳಿ, ಕಂಚು ಸೇರಿ ಒಟ್ಟು 107 ಪದಕಗಳನ್ನ ಬಾಚಿಕೊಂಡಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ ಒಟ್ಟು 28 ಚಿನ್ನ, 38 ಬೆಳ್ಳಿ ಹಾಗೂ 41 ಕಂಚಿನ ಪದಕಗಳೊಂದಿಗೆ 107 ಪದಕಗಳನ್ನು ಗೆದ್ದಿದೆ.

ಪ್ರಧಾನಿ ಮೋದಿ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಸಹ ಭಾರತದ ಕ್ರೀಡಾಪಟುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಮೋದಿ, ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಸಾಧನೆಯೊಂದಿಗೆ ವಿದಾಯ ಹೇಳಿದೆ. ನಮ್ಮ ಅಸಾಧಾರಣ ಕ್ರೀಡಾಪಟುಗಳು 107 ಪದಕಗಳನ್ನು ತಂದುಕೊಟ್ಟಿದ್ದಾರೆ. ಕಳೆದ 60 ವರ್ಷಗಳಲ್ಲಿ ಅದ್ಭುತ ಸಾಧನೆ ಮಾಡಿದ್ದು, ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಶ್ಲಾಘಿಸಿದ್ದಾರೆ.

The post ಈ ವರ್ಷದ ಏಷ್ಯನ್‌ ಗೇಮ್ಸ್‌ಗೆ ಬಿತ್ತು ತೆರೆ: 2027ಕ್ಕೆ ಎಲ್ಲಿ ನಡೆಯುತ್ತೆ ಗೊತ್ತಾ? appeared first on Ain Live News.

LEAVE A REPLY

Please enter your comment!
Please enter your name here