Home Uncategorized ಈ ವರ್ಷವೂ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೊಸ ವರ್ಷಾಚರಣೆ ಮೇಲೆ ಕೊರೋನಾ ಕರಿನೆರಳು!

ಈ ವರ್ಷವೂ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೊಸ ವರ್ಷಾಚರಣೆ ಮೇಲೆ ಕೊರೋನಾ ಕರಿನೆರಳು!

14
0
Advertisement
bengaluru

ವಿದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಬೆಂಗಳೂರು: ವಿದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮುಂದಾಗಿದ್ದು, ಅದರಂತೆ, ಡಿಸೆಂಬರ್ 31 ರಂದು ಬ್ರಿಗೇಡ್ ರಸ್ತೆ ಮತ್ತು ಎಂಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆ ನಡೆಯುವುದು ಅನುಮಾನವಾಗಿದೆ.

ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಬೆಂಗಳೂರು ಸಾಕಷ್ಟು ದುರಂತಗಳಿಗೆ ಸಾಕ್ಷಿಯಾಗಿತ್ತು. ನಗರವು ಇದೇ ರೀತಿಯ ಒತ್ತಡವನ್ನು ಮತ್ತೆ ನಿಭಾಯಿಸಲು ಸಾಧ್ಯವಿಲ್ಲ ಎಂದು ಬಿಬಿಎಂಪಿಯ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಹೆಚ್ಚಿನ ಜನರು ಹೋಟೆಲ್‌ಗಳು ಮತ್ತು ಇತರ ಸ್ಥಳಗಳಲ್ಲಿ ಉದ್ಯೋಗದಲ್ಲಿರುವುದರಿಂದ, ಸೋಂಕು ಹೆಚ್ಚಾಗಿ ಹರಡುವ ಸಾಧ್ಯತೆಗಳಿವೆ. ಹೀಗಾಗಿ ಪಾರ್ಟಿ ಆಯೋಜನೆಗೆ ಅವಕಾಶ ನೀಡುವುದು ಮತ್ತು ನಿಯಮಗಳನ್ನು ಗಾಳಿಗೆ ತೂರುವುದರಿಂದ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

bengaluru bengaluru

ಇತ್ತೀಚೆಗೆ ಚೀನಾದಲ್ಲಿ ಉಲ್ಬಣಗೊಳ್ಳುತ್ತಿರುವ ಕೋವಿಡ್ ರೂಪಾಂತರವು ಭಾರತದ ಕೆಲವು ಭಾಗಗಳಲ್ಲಿ ಪತ್ತೆಯಾಗಿರುವುದರಿಂದ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಾಗಿ ಬಿಬಿಎಂಪಿ ಎದುರು ನೋಡುತ್ತಿದೆ.

 “ಮನೆಯಿಂದ ಹೊರಬರುವಾಗ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಮುಂತಾದ ಕೋವಿಡ್ ನಿಯಮಗಳನ್ನು ಅನುಸರಿಸಬೇಕು ಎಂದು ನಾವು ಈಗಾಗಲೇ ಸೂಚನೆ ನೀಡಿದ್ದೇವೆ.

ಹೊಸ ವರ್ಷದ ಮಾರ್ಗಸೂಚಿಗಳನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ, ಏಕೆಂದರೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ನೀಡಿಲ್ಲ. ಅಧಿಕಾರಿಗಳು ಸಲಹೆ ನೀಡಿದ ಬಳಿಕ ಪಾಲಿಕೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ ಅವರು ಹೇಳಿದ್ದಾರೆ.

ಕೋವಿಡ್ ಸೋಂಕು ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಹಾಗೂ ಎಂಜಿ ರಸ್ತೆಯ ವ್ಯಾಪಾರಸ್ಥರು ಈ ಬಾರಿ ಭಾರೀ ಸಂಭ್ರಮದಲ್ಲಿ ಹೊಸ ವರ್ಷಾಚರಣೆ ಮಾಡಲು ಸಜ್ಜಾಗಿದ್ದರು. ಇದೀಗ ಕೋವಿಡ್ ಆತಂಕ ಮತ್ತೆ ಶುರುವಾಗಿರುವ ಹಿನ್ನೆಲೆಯಲ್ಲಿ ವ್ಯಾಪಾಸ್ಥರು ಅಸಮಾಧಾನಗೊಂಡಿದ್ದಾರೆ.

ಒಂದು ವೇಳೆ ಹೊಸವರ್ಷಾಚರಣೆಗೆ ಪ್ರಾಧಿಕಾರ ಬ್ರೇಕ್ ಹಾಕಿದರೆ, ನಾವು ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆಂದು ಬ್ರಿಗೇಡ್ ರಸ್ತೆ ಅಂಗಡಿಗಳು ಮತ್ತು ಸಂಸ್ಥೆಗಳ ಸಂಘದ ಕಾರ್ಯದರ್ಶಿ ಸುಹೇಲ್ ಯೂಸುಫ್ ಅವರು ಹೇಳಿದ್ದಾರೆ.


bengaluru

LEAVE A REPLY

Please enter your comment!
Please enter your name here