Home Uncategorized ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ!

ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ!

51
0

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಉಜ್ಜಯನಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪುತ್ರಿ ಬಿವೈ ಅರುಣಾದೇವಿ ಮತ್ತಿತರ ಕುಟುಂಬ ಸದಸ್ಯರೊಂದಿಗೆ ಇಂದು ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಬಿಎಸ್ ವೈ, ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ, ಪುನಸ್ಕಾರ ನೆರವೇರಿಸಿದರು. ಶಾಸಕ ಎಸ್.ಆರ್. ವಿಶ್ವನಾಥ್ ಮತ್ತಿತರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿಗೆ ರಾಜ್ಯ ನಾಯಕರ ಅಸಮ್ಮತಿ? ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ; ಬಿಎಸ್ ವೈ ಯೂಟರ್ನ್ ಏಕೆ!

#WATCH | Former Karnataka CM and senior BJP leader BS Yediyurappa offers prayers at the Mahakal Temple in Ujjain, Madhya Pradesh. pic.twitter.com/vZ72a4Gssf
— ANI (@ANI) September 11, 2023

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ಜಗತ್ತು ಮತ್ತು ವಿಶ್ವದಾದ್ಯಂತ ಆಗಮಿಸಿದ ನಾಯಕರು  ಶ್ಲಾಘಿಸುತ್ತಿದ್ದಾರೆ. ಇಡೀ ದೇಶದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 
 

#WATCH | Ujjain, Madhya Pradesh | On G-20 Summit in Delhi, former Karnataka CM and senior BJP leader BS Yediyurappa says, “The entire world is appreciating PM Modi’s decision and important people from the entire world had come…I congratulate him on behalf of the entire… pic.twitter.com/kD3TLnn744
— ANI (@ANI) September 11, 2023

LEAVE A REPLY

Please enter your comment!
Please enter your name here