Home Uncategorized ಉಡುಪಿ: ಆರೋಗ್ಯ ಸಚಿವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ

ಉಡುಪಿ: ಆರೋಗ್ಯ ಸಚಿವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ

22
0

ಉಡುಪಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಫೆ.9 ಮತ್ತು 10ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ.9ರಂದು ರಾತ್ರಿ 9ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಫೆ.10ರಂದು ಬೆಳಗ್ಗೆ 10 ಗಂಟೆಗೆ ಕುಂದಾಪುರದ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್‌ರೀಚ್ ಸರ್ವಿಸ್ ಸೆಂಟರ್ ಹಾಗೂ ನೂತನ ಡಯಾಲಿಸಿಸ್ ಘಟಕದ ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಕೋಟೇಶ್ವರದ ಸಹನಾ ಕನ್ವೆನ್ಷನ್ ಸೆಂಟರ್‌ನಲ್ಲಿ ಖಾಸಗಿ ಕಾರ್ಯಕ್ರಮ. ಅಪರಾಹ್ನ 1 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಕೆ.ಎಫ್.ಡಿ ಬಾಧಿತ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ, 2:00 ಗಂಟೆಗೆ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಡಯಾಲಿಸಿಸ್ ಘಟಕಗಳ ಲೋಕಾರ್ಪಣೆ, 2:30ಕ್ಕೆ ಉಡುಪಿ ನಗರದ ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರಿಶೀಲನೆ. ನಂತರ 3 ಗಂಟೆಗೆ ಮಣಿಪಾಲದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

LEAVE A REPLY

Please enter your comment!
Please enter your name here