Home Uncategorized ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ ಮಕ್ಕಳಾಟವೆಂಬ ಅರ್ಥದಲ್ಲಿ ಹೇಳಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ ಮಕ್ಕಳಾಟವೆಂಬ ಅರ್ಥದಲ್ಲಿ ಹೇಳಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

20
0

ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣವನ್ನು ಮಕ್ಕಳಾಟವೆಂದು ನಾನು ಹೇಳಿಲ್ಲ. ಬಿಜೆಪಿಯವರು ಇದನ್ನು ಅನಗತ್ಯವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.  ಬೆಂಗಳೂರು: ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣವನ್ನು ಮಕ್ಕಳಾಟವೆಂದು ನಾನು ಹೇಳಿಲ್ಲ. ಬಿಜೆಪಿಯವರು ಇದನ್ನು ಅನಗತ್ಯವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. 
ಘಟನೆ ಬಗ್ಗೆ ಗೃಹ ಸಚಿವರು ಲಘುವಾಗಿ ಮಾತನಾಡಿದ್ದಾರೆ, ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆದರು.

ಮನೆಯಿಂದ ಹೊರಬಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಪಷ್ಟನೆ ನೀಡಿದ ಗೃಹ ಸಚಿವರು ಸ್ನೇಹಿತರ ಮಧ್ಯೆ ಇಂತಹ ಘಟನೆಗಳು ನಡೆಯುತ್ತೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು ಎಂದು ಹೇಳಿದ್ದು, ಅಂತಹ ಘಟನೆ ಕುರಿತು ಪ್ರಿನ್ಸಿಪಾಲ್​ಗೆ ಬಿಡಬೇಕು. ಅದಕ್ಕೆ ಅವರನ್ನ ಸಸ್ಪೆಂಡ್​ ಮಾಡೋದಾದರೇ ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ತೆಗೆದುಕೊಳ್ಳುತ್ತಾರೆ, ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು ಎಂದರು. ಇನ್ನು ಘಟನೆ ಕುರಿತು ಈಗಾಗಲೇ ಪೊಲೀಸರು ಸೊಮೋಟೋ ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತದೆ. ಸತ್ಯಾ ಸತ್ಯತೆ ಹೊರಬರುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here