Home Uncategorized ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ: ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ...

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ: ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ ಗೃಹ ಸಚಿವರ ಮನೆಗೆ ಮುತ್ತಿಗೆ ಯತ್ನ

12
0

ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿನಿಯರು ರೆಕಾರ್ಡ್ ಮಾಡಿರುವ ಪ್ರಕರಣ ಈಗ ವಿವಿಧ ರೂಪ ಪಡೆದುಕೊಳ್ಳುತ್ತಿದ್ದು ಪ್ರಕರಣ ಬಿಗಡಾಯಿಸುತ್ತಿದೆ. ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿನಿಯರು ರೆಕಾರ್ಡ್ ಮಾಡಿರುವ ಪ್ರಕರಣ ಈಗ ವಿವಿಧ ರೂಪ ಪಡೆದುಕೊಳ್ಳುತ್ತಿದ್ದು ಪ್ರಕರಣ ಬಿಗಡಾಯಿಸುತ್ತಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ನಿನ್ನೆ ನಗರಕ್ಕೆ ಆಗಮಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲು ನಿರ್ಧರಿಸಿರುವ ಬಿಜೆಪಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ನಿನ್ನೆ ನೀಡಿರುವ ಹೇಳಿಕೆ ಖಂಡಿಸಿ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಇಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರ, ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ವಿರುದ್ಧ ಧಿಕ್ಕಾರ ಕೂಗಿದ್ದಾರೆ. 
ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದರು. ಪೊಲೀಸ್ ಬಂದೋಬಸ್ತ್, ಬ್ಯಾರಿಕೇಡ್ ಗಳನ್ನು ತಳ್ಳಿ ಗೃಹ ಸಚಿವರ ಮನೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆಯಿತು. 

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣದ ಜಾಲ ಹಿಂದೆ ಭಯೋತ್ಪಾದಕರ ಕೈವಾಡವಿರುವ ಶಂಕೆಯಿದೆ. ಈ ಬಗ್ಗೆ ಸರ್ಕಾರ ಸೂಕ್ತ ತನಿಖೆ ಕೈಗೊಳ್ಳದೆ ಆರೋಪಿಗಳ ಬಗ್ಗೆ ಮೃದು ಧೋರಣೆ ತಳೆಯುತ್ತಿರುವುದು ಸರಿಯಲ್ಲ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here