Home Uncategorized ಉಡುಪಿ ಕಾಲೇಜು ವಿಡಿಯೋ ರೆಕಾರ್ಡ್ ಪ್ರಕರಣ: ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಸಂತ್ರಸ್ತ ವಿದ್ಯಾರ್ಥಿನಿ

ಉಡುಪಿ ಕಾಲೇಜು ವಿಡಿಯೋ ರೆಕಾರ್ಡ್ ಪ್ರಕರಣ: ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಸಂತ್ರಸ್ತ ವಿದ್ಯಾರ್ಥಿನಿ

31
0

ವಿವಾದಿತ ಉಡುಪಿ ಕಾಲೇಜು ವಾಶ್‌ರೂಮ್ ವಿಡಿಯೋ ರೆಕಾರ್ಡ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಡುಪಿ: ವಿವಾದಿತ ಉಡುಪಿ ಕಾಲೇಜು ವಾಶ್‌ರೂಮ್ ವಿಡಿಯೋ ರೆಕಾರ್ಡ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜುಲೈ 18ರಂದು ಈ ಘಟನೆ ಸಂಭವಿಸಿದ್ದು, ಮೂವರು ಮುಸ್ಲಿಂ ಹುಡುಗಿಯರು ಸಂತ್ರಸ್ತೆ ವಾಶ್‌ರೂಮ್‌ಗೆ ತೆರಳಿದಾಗ ವಿಡಿಯೋ ರೆಕಾರ್ಡ್ ಮಾಡಿದ್ದರು.

ಈ ಘಟನೆ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ಇದನ್ನೂ ಓದಿ: ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎಸ್‌ಐಟಿ ತನಿಖೆ ಕೋರಿ ರಾಜ್ಯಪಾಲರ ಭೇಟಿಗೆ ಬಿಜೆಪಿ ಮುಂದು

ನ್ಯಾಯಾಲಯದ ಮುಂದೆ ಸಂತ್ರಸ್ತ ವಿದ್ಯಾರ್ಥಿನಿ ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ವಿವರಿಸಿದ್ದಾಳೆ. ನ್ಯಾಯಾಲಯವು ಆಕೆಯ ಹೇಳಿಕೆಯನ್ನು ಎಚ್ಚರಿಕೆಯಿಂದ ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಮೂವರು ಆರೋಪಿಗಳ ವಿರುದ್ಧ ಔಪಚಾರಿಕ ದೂರು ದಾಖಲಿಸಲು ಸಂತ್ರಸ್ತೆಗೆ ಇಷ್ಟವಿರಲಿಲ್ಲ. ಆದರೆ, ಘಟನೆ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಉಡುಪಿ ಕಾಲೇಜು ವಾಶ್‌ರೂಮ್‌ ವಿಡಿಯೋ ಪ್ರಕರಣ: ತ್ವರಿತವಾಗಿ ಎಫ್ಎಸ್ಎಲ್ ವರದಿ ಕೇಳಿದ ಪೊಲೀಸರು!

ತನಿಖೆ ಸಮಯದಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ಎಲ್ಲಾ ಮೂವರು ಆರೋಪಿ ವಿದ್ಯಾರ್ಥಿನಿಯರು ಈಗಾಗಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here