Home Uncategorized ಉಡುಪಿ: ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಕುಮ್ಮಕ್ಕು ಆರೋಪ; ಬಿಜೆಪಿ ಮುಖಂಡನ ವಿರುದ್ಧ ಕೇಸ್

ಉಡುಪಿ: ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಕುಮ್ಮಕ್ಕು ಆರೋಪ; ಬಿಜೆಪಿ ಮುಖಂಡನ ವಿರುದ್ಧ ಕೇಸ್

20
0

ಮಲ್ಪೆಯ ಮಹಾಲಕ್ಷ್ಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಸುಬ್ಬಣ್ಣ (50) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.  ಉಡುಪಿ: ಮಲ್ಪೆಯ ಮಹಾಲಕ್ಷ್ಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಸುಬ್ಬಣ್ಣ (50) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಸುಬ್ಬಣ್ಣ  ಮೃತಪಟ್ಟಿದ್ದು, ಮಾರ್ಚ್ 8 ರಂದು ರಾತ್ರಿ 8.30 ರ ಸುಮಾರಿಗೆ ಮಲ್ಪೆಯ ಲಾಡ್ಜ್‌ನಲ್ಲಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎಂದು ವರದಿಯಾಗಿದೆ. ಪೊಲೀಸರಿಗೆ ಸಿಕ್ಕ ಡೆತ್ ನೋಟ್‌ನಲ್ಲಿ, ಸುಬ್ಬಣ್ಣ ಅವರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಒತ್ತಡವಿತ್ತು ಎಂದು ವರದಿಯಾಗಿದೆ.

ಮಲ್ಪೆ ಪೊಲೀಸರು ಸುವರ್ಣ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು ಎಸ್‌ಸಿ ಎಸ್‌ಟಿ (ದೌರ್ಜನ್ಯ ತಡೆ ಕಾಯಿದೆ, 1989) 3 (2) (ವಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ರಿಯಾಜ್ ಎಂಬಾತನಿಗೆ ಮಂಜೂರಾದ ಸಾಲವನ್ನು ವಸೂಲಿ ಮಾಡುವಂತೆ ಬ್ಯಾಂಕ್ ಆಡಳಿತ ಮಂಡಳಿಯಲ್ಲಿ ಸುವರ್ಣ ಹಾಗೂ ಇತರರು ಒತ್ತಡ ಹೇರಿದ್ದರಿಂದ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಬ್ಬಣ್ಣ ಅವರ ಕಿರಿಯ ಸಹೋದರ ಸುರೇಶ್ ಕೆ ದೂರಿನಲ್ಲಿ ಈಗಾಗಲೇ ತಿಳಿಸಿದ್ದಾರೆ. ಎಫ್‌ಐಆರ್‌ನಲ್ಲಿ ರಿಯಾಜ್‌ನನ್ನು ಐದನೇ ಆರೋಪಿ ಎಂದು ಹೆಸರಿಸಲಾಗಿದೆ.

ಇದೇ ವೇಳೆ ದಲಿತ ಸಂಘರ್ಷ ಸಮಿತಿ ಐಕ್ಯ ಹೋರಾಟ ಸಮಿತಿ (ದಲಿತ ಸಂಘಟನೆಗಳ ಒಕ್ಕೂಟ)ದ ಮುಖ್ಯ ಸಂಚಾಲಕ ಮಂಜುನಾಥ ಗಿಳಿಯಾರ್ ಅವರು ಸುಬ್ಬಣ್ಣ ಆತ್ಮಹತ್ಯೆ ಪ್ರಕರಣದ ವಿಸ್ತೃತ ಮತ್ತು
ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ಮೇಲೆ ಯಾವುದೇ ರಾಜಕೀಯ ಒತ್ತಡ ಹೇರಬಾರದು, ಸುಬ್ಬಣ್ಣ ಅವರು ಮೃದು ಸ್ವಭಾವದ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದು, ಪ್ರಾಮಾಣಿಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಮ್ಯಾನೇಜರ್ ಆಗಿ ಬಡ್ತಿ ಪಡೆದಿದ್ದರು.  ಸುಬ್ಬಣ್ಣ ಅವರು ಮಲ್ಪೆಯ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಪುತ್ರನೊಂದಿಗೆ ವಾಸವಿದ್ದರು. ಈಗ ಅವರ ಪತ್ನಿ- ಆಶಾ ಅವರಿಗೆ ದಿಕ್ಕು
ತೋಚದಂತಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಅರ್ಹ ಮಹಿಳೆಯಾಗಿರುವುದರಿಂದ ಆಕೆಗೆ  ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣದ ಆರೋಪಿಗಳು ರಾಜಕೀಯವಾಗಿ ಪ್ರಭಾವಶಾಲಿಯಾಗಿರುವುದರಿಂದ ಸಾಕ್ಷ್ಯವನ್ನು ಹಾಳು ಮಾಡದಂತೆ ಪೊಲೀಸರು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
 

LEAVE A REPLY

Please enter your comment!
Please enter your name here