Home Uncategorized ಉಡುಪಿ: ಜ.6ರಂದು ಬಿಜೆಪಿ ಸಭೆ; ಆರ್.ಅಶೋಕ್ ಭಾಗಿ

ಉಡುಪಿ: ಜ.6ರಂದು ಬಿಜೆಪಿ ಸಭೆ; ಆರ್.ಅಶೋಕ್ ಭಾಗಿ

24
0

ಉಡುಪಿ, ಜ.5: ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ಜ.6ರಂದು ಬೆಳಿಗ್ಗೆ ಗಂಟೆ 11.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.

ಸಭೆಯಲ್ಲಿ ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3ಗಂಟೆಗೆ ಸಿದ್ದಾಪುರ ಗ್ರಾಮ ಪಂಚಾಯತ್ ಬಳಿ ನಡೆಯಲಿರುವ ’ವಿಕಸಿತ ಭಾರತ ಸಂಕಲ್ಪಯಾತ್ರೆ’ಯಲ್ಲಿ ಇವರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here