Home Uncategorized ಉಡುಪಿ ಮಾಜಿ ಶಾಸಕ ಯುಆರ್ ಸಭಾಪತಿ ನಿಧನ

ಉಡುಪಿ ಮಾಜಿ ಶಾಸಕ ಯುಆರ್ ಸಭಾಪತಿ ನಿಧನ

34
0

ಕಾಂಗ್ರೆಸ್ ಮುಖಂಡ, ಉಡುಪಿ ಮಾಜಿ ಶಾಸಕ ಯು.ಆರ್. ಸಭಾಪತಿ (UR Sabhapati) ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 71 ವರ್ಷ ವಯಸ್ಸಾಗಿತ್ತು. ಉಡುಪಿ: ಕಾಂಗ್ರೆಸ್ ಮುಖಂಡ, ಉಡುಪಿ ಮಾಜಿ ಶಾಸಕ ಯು.ಆರ್. ಸಭಾಪತಿ (UR Sabhapati) ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 71 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಭಾಪತಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯರನ್ನು ಅಗಲಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಅವರ ರಾಜಕೀಯ ಪ್ರವೇಶಕ್ಕೂ ಸಭಾಪತಿ ಪ್ರೇರಣೆಯಾಗಿದ್ದರು. ರಾಷ್ಟ್ರೀಯ ಜನತಾದಳ, ಜಾತ್ಯತೀತ ಜನತಾದಳದೊಂದಿಗೂ ಗುರುತಿಸಿಕೊಂಡಿದ್ದ ಯು.ಆರ್. ಸಭಾಪತಿಯವರು 80-90ರ ದಶಕದಲ್ಲಿ ಕರಾವಳಿ ಭಾಗದ ಪ್ರಭಾವಿ ನಾಯಕರಲ್ಲೊಬ್ಬರಾಗಿದ್ದರು.

ಇದನ್ನೂ ಓದಿ: ರಾಜಕೀಯ ಜೀವನ ಅಂತ್ಯ; ಸ್ಪೀಕರ್ ಹುದ್ದೆಗೆ ಮುಂದೆ ಬಾರದ ನಾಯಕರು, ಕಾಂಗ್ರೆಸ್ಸಿಗರನ್ನು ಬಿಡದೆ ಕಾಡುತ್ತಿದೆ ಅದೊಂದು ಭಯ!

ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಅನುಯಾಯಿಯಾಗಿದ್ದ ಯು.ಆರ್. ಸಭಾಪತಿ ಅವರು, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಕೆಸಿಪಿಯಿಂದ ಶಾಸಕರಾಗಿದ್ದ 1999ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿ ಚುನಾಯಿತರಾಗಿದ್ದರು. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ತಿನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಸಭಾಪತಿಯವರು, ಪರಿಷತ್‌ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದರು. ಅಲ್ಲದೆ, ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. 

ಕರ್ನಾಟಕ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು
1989ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಇವರಿಗೆ ಕಾಂಗ್ರೆಸ್‌ ಟಿಕೆಟ್‌ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಬಳಿಕ 1994ರಲ್ಲಿ ಎಸ್. ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿಯಿಂದಲೇ ಸ್ಪರ್ಧೆ ಮಾಡಿ ಜಯಭೇರಿ ಬಾರಿಸಿದ್ದರು. ಬಳಿಕ ಅವರು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದು, 1999ರಲ್ಲಿ ಆ ಪಕ್ಷದ ಟಿಕೆಟ್‌ ಪಡೆದು ಸ್ಪರ್ಧೆ ಮಾಡಿ ಪುನಃ ಶಾಸಕರಾಗಿ ಚುನಾಯಿತರಾದರು. ಆದರೆ, 2004ರ ಚುನಾವಣೆಯಲ್ಲಿ ಇವರು ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡರು. ಇವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. 

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಮಿತ್ರಕೂಟಗಳ ಒಗ್ಗಟ್ಟು ಪ್ರದರ್ಶನ

ಸಭಾಪತಿ ಅವರು 1987 ರಲ್ಲಿ ದ.ಕ ಜಿಲ್ಲಾ ಪರಿಷತ್ತಿನ ಉದ್ಯಾವರ ಭಾಗದ ಸದಸ್ಯರಾಗಿ ಆಯ್ಕೆಯಾದರು ಮತ್ತು ಅವರು ಪರಿಷತ್ತಿನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ದ.ಕ ಜಿಲ್ಲಾ ಕಾಂಗ್ರೆಸ್ ಉತ್ತರ ವಲಯದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1989ರ ಉಡುಪಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್‌ನ ಮನೋರಮಾ ಮಧ್ವರಾಜ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಮನೋರಮಾ ಮಧ್ವರಾಜ್ ಅವರಿಂದ ಸೋಲು ಕಂಡಿದ್ದರು. ಅವರು 1994 ರ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದರು. 1999ರಲ್ಲಿ ಕಾಂಗ್ರೆಸ್ ಯು ಆರ್ ಸಭಾಪತಿ ಅವರನ್ನು ಕಣಕ್ಕಿಳಿಸಿ ಗೆಲುವು ದಾಖಲಿಸಿತ್ತು. 2004 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿಯ ಕೆ ರಘುಪತಿ ಭಟ್ ಅವರಿಂದ ಸೋಲಿಸಲ್ಪಟ್ಟರು. 
 

LEAVE A REPLY

Please enter your comment!
Please enter your name here