ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ಶನಿವಾರ ನಡೆದಿದೆ. ಉಡುಪಿ: ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ಶನಿವಾರ ನಡೆದಿದೆ.
ಮೃತ ಯುವಕರನನ್ನು ಕುಕ್ಕುಂದೂರಿನ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಶನಿವಾರ ಸಂಜೆ 6.20ಕ್ಕೆ ವಾಲಿಬಾಲ್ ಆಡುತ್ತಿದ್ದಾಗ ಸಂತೋಷ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಉಳಿದ ಆಟಗಾರರು ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಸಂಜೆ 6.35ಕ್ಕೆ ಸಂತೋಷ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಕುಕ್ಕುಂದೂರಿನ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಸಂತೋಷ್ ವಾಲಿಬಾಲ್ ಆಡುತ್ತಿದ್ದರೆಂದು ತಿಳಿದುಬಂದಿದೆ.
ಸಂತೋಷ್ ಅವರ ಸಹೋದರ-ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.