Home Uncategorized ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

76
0

ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ- ಖುಷ್ಬೂ ಸುಂದರ್​

ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ತನಿಖಾಧಿಕಾರಿಗಳ ತನಿಖೆಗೆ ಸಹಕರಿಸಬೇಕು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಸಾಕ್ಷಿ ಗಳಿಗೆ ಯಾವುದೇ ಬೆದರಿಕೆ ಹಾಕಬಾರದು ಎಂಬ ಷರತ್ತುಗಳೊಂದಿಗೆ ತಲಾ 20,000ರೂ. ಬಾಂಡ್ ಮೇಲೆ ಕೋರ್ಟ್ ಜಾಮೀನು ನೀಡಿದೆ.

LEAVE A REPLY

Please enter your comment!
Please enter your name here