ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ. ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.
ಕುಂದಾಪುರದ ಡಿವೈಎಸ್‌ಪಿಯಾಗಿ ಕಾರ್ಯನಿವರ್ಹಿಸುತ್ತಿರುವ ಬೆಳ್ಳಿಯಪ್ಪ ಅವರು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ ಎಂದು ಉಡುಪಿ ಎಸ್‌ಪಿ ಅಕ್ಷಯ್ ಹಾಕೇ ಮಚ್ಚಿಂದ್ರ ಅವರು ತಿಳಿಸಿದ್ದಾರೆ.
ತನಿಖಾಧಿಕಾರಿಯನ್ನು ಬದಲು ಮಾಡುವಂತೆ ಎಬಿವಿಪಿ, ಬಿಜೆಪಿ ಆಗ್ರಹಿಸಿದ್ದವು. ಅಲ್ಲದೆ, ಪೊಲೀಸರು ಎಫ್ಐಆರ್ ದಾಖಲು ಮಾಡಲು ವಿಳಂಬ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿಯೂ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ತನಿಖೆ ಜವಾಬ್ದಾರಿಯನ್ನ ನೀಡಲಾಗಿದೆ. ಅಲ್ಲದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಆಗಿರುವುದರಿಂದ, ವಿದ್ಯಾರ್ಥಿನಿಯರು, ಕಾಲೇಜು ಸಿಬ್ಬಂದಿ ಹೇಳಿಕೆ ದಾಖಲಿಸಲು ಸುಲಭವಾಗುವಂತೆ ತನಿಖಾ ತಂಡದಲ್ಲಿ ಹೆಚ್ಚುವರಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲು ಉಡುಪಿ ಎಸ್’ಪಿ ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.