ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ಆಗಮಿಸಿದ್ದು, ಶುಕ್ರವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಮಂಗಳೂರು: ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ಆಗಮಿಸಿದ್ದು, ಶುಕ್ರವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಶ್ರೀಕೃಷ್ಣನ ದರ್ಶನದ ನಂತರ ಸಚಿವರು ಅದಮಾರು ಮಠಕ್ಕೆ ಭೇಟಿ ನೀಡಿ ಮಠದ ಮುಖ್ಯಸ್ಥ ಶ್ರೀ ವಿಶ್ವಪ್ರಿಯ ತೀರ್ಥರೊಂದಿಗೆ ಚರ್ಚೆ ನಡೆಸಿದರು.
ಇಂದು ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಒಂಬತ್ತು ವರ್ಷಗಳ ಸಾಧನೆ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.