Home Uncategorized ಉಡುಪಿ: ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಸುಧಾಕರ್ ಶೆಟ್ಟಿ ನಿಧನ

ಉಡುಪಿ: ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಸುಧಾಕರ್ ಶೆಟ್ಟಿ ನಿಧನ

25
0

ಉಡುಪಿ, ಜ.4: ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ.ಸುಧಾಕರ್ ಶೆಟ್ಟಿ(72) ಇಂದು ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕರಾವಳಿ ಬೈಪಾಸ್ ನಲ್ಲಿರುವ ಕರಾವಳಿ ಹೊಟೇಲ್ ನ ಮಾಲಕರಾಗಿದ್ದ ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸೋಲು ಕಂಡಿದ್ದರು.

2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 2013ರ ಚುನಾವಣೆ ಯಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿ ಭಟ್ ಸಿಡಿ ಗದ್ದಲದಿಂದ ಸ್ಪರ್ಧಿಸಲು ಹಿಂದೆ ಸರಿದ ಹಿನ್ನೆಲೆಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ ಅವರು ಪ್ರಮೋದ್ ಮಧ್ವರಾಜ್ ವಿರುದ್ಧ ಸೋಲು ಅನುಭವಿಸಿದ್ದರು. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅವರು ಅಲಂಕರಿಸಿದ್ದರು.

LEAVE A REPLY

Please enter your comment!
Please enter your name here