ಬೆಂಗಳೂರು;- ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಶ್ರೀ ಜಾಮೀನು ಆದೇಶವನ್ನು ಅ.16ಕ್ಕೆ ಕೋರ್ಟ್ ಕಾಯ್ದಿರಿಸಿದೆ.
ಹಾಲಶ್ರೀ ಸ್ವಾಮೀಜಿ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿದ 57ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿ.ಗೋವಿಂದಯ್ಯ ಅವರು ಬುಧವಾರ ಆದೇಶ ಕಾಯ್ದಿರಿಸಿದರು.
ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಅವರಿಂದ 5 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಆರೋಪಿಸಿ ಪೆÇಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣದ ಆರೋಪಿಗಳಾದ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
The post ಉದ್ಯಮಿಗೆ ವಂಚನೆ ಕೇಸ್, ಆರೋಪಿ ಹಾಲಶ್ರೀ ಜಾಮೀನು ಆದೇಶ ಆದೇಶ ಕಾಯ್ದಿರಿಸಿದ ಕೋರ್ಟ್ appeared first on Ain Live News.
