Home Uncategorized ಎಕ್ಸ್‌ಪ್ರೆಸ್‌ವೇ ದೋಷಗಳ ಕುರಿತು ಕೇಂದ್ರ ಸಚಿವ ಗಡ್ಕರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ

ಎಕ್ಸ್‌ಪ್ರೆಸ್‌ವೇ ದೋಷಗಳ ಕುರಿತು ಕೇಂದ್ರ ಸಚಿವ ಗಡ್ಕರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ

14
0

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದೋಷಗಳ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಮೈಸೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದೋಷಗಳ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ನಿನ್ನೆಯಷ್ಟೇ ಎಕ್ಸ್‌ಪ್ರೆಸ್‌ವೇಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣ ಸರ್ವಿಸ್ ರಸ್ತೆಗಳನ್ನು ಸುಧಾರಿಸಲು 156 ಕೋಟಿ ರೂ.ಗಳ ಕೋರಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಪ್ರಸ್ತಾವನೆಗೆ ಒಪ್ಪಿಗೆ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು.

ಇದೇ ವೇಳೆ ವಾಹನಗಳ ವೇಗ ತಪಾಸಣೆ ಮಾಡುವ ಸ್ಪೀಡ್ ಡಿಟೆಕ್ಟರ್‌ನ ಪ್ರಾತ್ಯಕ್ಷಿಕೆಯನ್ನು ಮುಖ್ಯಮಂತ್ರಿಗಳಿಗೆ ತೋರಿಸಲಾಯಿತು.ಟ

ಡಿಟೆಕ್ಟರ್ ವಾಹನಗಳ ವೇಗವನ್ನು ಪತ್ತೆ ಮಾಡಲಿದ್ದು. ನಂತರ ಮುಂದಿನ ಟೋಲ್ ಗೇಟ್‌ನಲ್ಲಿರುವ ಅಧಿಕಾರಿಗಳಿಗೆ ಮಾಹಿತಿಯನ್ನು ರವಾನಿಸಲಿದೆ. ಅಲ್ಲಿ ಚಾಲಕನಿಗೆ ದಂಡ ವಿಧಿಸುವ ಕೆಲಸವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ಅಳವಡಿಸಲಾಗಿರುವ ಸ್ಮಾರ್ಟ್ ಎಐ ಕ್ಯಾಮೆರಾಗಳು ವಾಹನಗಳ ವೇಗವನ್ನು ರೆಕಾರ್ಡ್ ಮಾಡಿಕೊಳ್ಳಲಿದೆ. ಅತಿಯಾಗಿ ವೇಗವಾಗಿ ಹೋಗುವ ವಾಹನಗಳಿಗೆ ಕೆಂಪು ಗುರುತನ್ನು ಹಾಕಲಾಗುವುದು. ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು, ಪ್ರತಿ 10 ಕಿ.ಮೀಗೆ ಸ್ಪೀಡ್ ಡಿಟೆಕ್ಟರ್ ಹಾಕಲಾಗುವುದು. ತರಾತುರಿಯಲ್ಲಿ ಕಾಮಗಾರಿ ಪೂರ್ಣಗೊಂಡಿರುವುದರಿಂದ ಎಕ್ಸ್‌ಪ್ರೆಸ್‌ವೇಯಲ್ಲಿ ಕೆಲವು ನ್ಯೂನತೆಗಳಿವೆ. ದೋಷಗಳ ಸರಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

NHAI ಸರ್ವಿಸ್ ರಸ್ತೆಗಳ ಕೆಲಸವನ್ನು ಪೂರ್ಣಗೊಳಿಸಿಲ್ಲ. ಆಗಮನ ಮತ್ತು ನಿರ್ಗಮನ ಸ್ಥಳಗಳಲ್ಲಿ ಲೋಪದೋಷಗಳನ್ನು ಸರಿಪಡಿಸಿಲ್ಲ ಎಂದು ತಿಳಿಸಿದರು.

ಶೀಘ್ರದಲ್ಲೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಎನ್‌ಎಚ್‌ಎಐ ಅಧಿಕಾರಿಗಳನ್ನು ಭೇಟಿ ಮಾಡಿ ಎಕ್ಸ್‌ಪ್ರೆಸ್‌ವೇ ಬಳಸುವ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಜೂನ್ 20ಕ್ಕೆ ಹೋಲಿಸಿದರೆ ಜುಲೈನಲ್ಲಿ ಐದು ಅಪಘಾತಗಳು ವರದಿಯಾಗಿವೆ, ವೇಗ ಪತ್ತೆ ಮಾಡಲು ಸ್ಪೀಡ್ ಡೆಟೆಕ್ಟರ್ ಗಳನ್ನು ಅಳವಡಿಸಿರುವುದರಿಂದ ಇದು ವಾಹನ ಚಾಲಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಈ ನಿಟ್ಟಿನಲ್ಲಿ ನಾನು ಎನ್‌ಎಚ್‌ಎಐ ಮತ್ತು ಪೊಲೀಸರೊಂದಿಗೆ ಸಭೆಗಳನ್ನು ನಡೆಸುತ್ತೇನೆ” ಎಂದರು.

ಕೃಷಿ ಸಚಿವ ಎನ್ .ಚಲುವರಾಯಸ್ವಾಮಿ ಅವರು ಮಾತನಾಡಿ, ಹಿಂದಿನ ಬಿಜೆಪಿ ಸರಕಾರ ಎಕ್ಸ್ ಪ್ರೆಸ್ ವೇ ಕಾಮಗಾರಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು. ಎಕ್ಸ್ ಪ್ರೆಸ್ ವೇ ಜತೆಗೆ ಸರ್ವಿಸ್ ರಸ್ತೆ, ಬೈಪಾಸ್ ರಸ್ತೆಗಳನ್ನು ನಿರ್ಮಿಸಿದ್ದರೆ ಸಮಸ್ಯೆಗಳಾಗುತ್ತಿರಲಿಲ್ಲ ಎಂದು ಹೇಳಿದರು.

ಇದೇ ವೇಳೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಿದ್ದರಾಮಯ್ಯ ಅವರಿಗೆ ವಿವರಿಸಿದರು.

LEAVE A REPLY

Please enter your comment!
Please enter your name here