ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾವಣೆ ನಿಮಿತ್ತ ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ರಾಂತಿ ತೆಗೆದುಕೊಂಡು ಬಳಿಕ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಕುಟುಂಬಸ್ಥರೇ ಟಾಪ್!
ಅಷ್ಟೇ ಅಲ್ಲದೆ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ ಗುಣಮುಖನಾಗುವೆ ಎನ್ನುವ ಸಂದೇಶ ನೀಡಿದ್ದಾರೆ.
ಶ್ವಾಸಕೋಶದ ಸೋಂಕು
ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಅವರು ಈಗ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಅಂತೆಯೇ ಸಣ್ಣ ಪ್ರಮಾಣದಲ್ಲಿ ಲಂಗ್ಸ್ ಇನ್ಫೆಕ್ಷನ್ ಹಾಗೂ ಡಸ್ಟ್ ಅಲರ್ಜಿ ಕೂಡ ಇದೆ. ಇದಲ್ಲದೆ ಜ್ವರ ಕೂಡಾ ಬಂದಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ, ಸ್ಪೆಷಲ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ್ ಅವರು ಎಚ್ಡಿ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಇದನ್ನೂ ಓದಿ: ಹಾಸನದಲ್ಲಿ ಸ್ವರೂಪ್ ಗೆಲ್ಲಿಸುವ ಮೂಲಕ ಪ್ರೀತಂ ಗೌಡಗೆ ತಕ್ಕ ಪಾಠ ಕಲಿಸಿ: ಹೆಚ್ ಡಿ ದೇವೇಗೌಡ
ಆಸ್ಪತ್ರೆಗೆ ನಿಖಿಲ್ ಭೇಟಿ
ನಿಖಿಲ್ ಕುಮಾರಸ್ವಾಮಿ ನಾಳೆ ಬೆಳಗ್ಗೆ ಆಸ್ಪತ್ರೆಗೆ ಭೇಟಿ ಕೊಟ್ಟು, ತಂದೆ ಆರೋಗ್ಯ ವಿಚಾರಿಸಲಿದ್ದಾರೆ. ನಾಳೆ ಮಧ್ಯಾಹ್ನದ ವೇಳೆ ಡಯಾಲಿಸಸ್ ಗೆ ಮಣಿಪಾಲ್ ಆಸ್ಪತ್ರೆಗೆ ಎಚ್ಡಿ ದೇವೇಗೌಡ ಸಹ ಆಗಮಿಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಸ್ಪೆಷಲ್ ವಾರ್ಡ್ ನಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆ ಬಳಿ ಯಾರೂ ಬರದಂತೆ ಸೂಚನೆ ನೀಡಲಾಗಿದೆ.