ಬೆಂಗಳೂರು : ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಶಾಸಕ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿದೆ. ಅಲ್ಲದೆ, ಸೋಮವಾರದವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿ ಕೋರ್ಟ್ ಆದೇಶಿದೆ.
ಜಾಮೀನು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರ, ಸರ್ಕಾರದ ಎಸ್.ಎಸ್.ಪಿ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ.
ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣಅವರು, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.