Home Uncategorized ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

22
0
Advertisement
bengaluru

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

ಮಾರ್ಚ್​ 31ರಿಂದ ಏಪ್ರಿಲ್ 15ರವರೆಗೆ 10ನೇ ತರಗತಿಯ  ಪರೀಕ್ಷೆಗಳು ನಡೆಯಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ತಾಣದಲ್ಲಿ ಪರಿಶೀಲಿಸಬಹುದಾಗಿದೆ.

ಇದನ್ನು ಓದಿ: 2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿವೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇರುವುದರಿಂದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

bengaluru bengaluru

ಪರಿಷ್ಕೃತ ವೇಳಾಪಟ್ಟಿ
ಮಾರ್ಚ್​ 31 ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 3 ರಂದು ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 6 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ
ಏಪ್ರಿಲ್ 8 ರಂದು ಅರ್ಥಶಾಸ್ತ್ರ
ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್ 12 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್
ಏಪ್ರಿಲ್ 15ರಂದು ಸಮಾಜ ವಿಜ್ಞಾನ


bengaluru

LEAVE A REPLY

Please enter your comment!
Please enter your name here