Home Uncategorized ಎಸ್‌ಯುವಿ ಕಾರು ಡಿಕ್ಕಿ: ಸೈಕಲ್ ಸವಾರ ಸಾವು

ಎಸ್‌ಯುವಿ ಕಾರು ಡಿಕ್ಕಿ: ಸೈಕಲ್ ಸವಾರ ಸಾವು

27
0

ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಟಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಬೆಂಗಳೂರು: ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಟಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಮೃತ ವ್ಯಕ್ತಿಯನ್ನು ನಾಗರಾಜ್ (47) ಎಂದು ಗುರುತಿಸಲಾಗಿದ್ದು, ಯಲಂಕದ ಬೇಗೂರು ನಿವಾಸಿಯಾಗಿದ್ದಾರೆಂದು ತಿಳಿದುಬಂದಿದೆ.

ನಿನ್ನೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಾಗರಾಜ್ ಅವರು ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಏರ್‌ಪೋರ್ಟ್ ರಸ್ತೆ ಕಡೆಗೆ ಸೈಕಲ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಅವರ ಬೈಸಿಕಲ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ನಾಗರಾಜ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಧ್ಯಾಹ್ನದ ವೇಳೆಗೆ ಅವರು ಮೃತಪಟ್ಟಿದ್ದಾರೆಂದು ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಚಾಲಕನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here