Home Uncategorized ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023: ಬೆಂಗಳೂರಿಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ 

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023: ಬೆಂಗಳೂರಿಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ 

19
0

ಯಲಹಂಕದ ವಾಯುನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023  ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023  ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು.

ಹೆಚ್ಎಎಲ್‌ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಿಜೆಪಿ ಹಿರಿಯ ಮುಖಂಡ ಅರವಿಂದ ಲಿಂಬಾವಳಿ ಮತ್ತಿತರರು ರಾಜನಾಥ್ ಸಿಂಗ್ ಅವರನ್ನು  ಬರಮಾಡಿಕೊಂಡರು.

ಇದನ್ನೂ ಓದಿ: ಬೆಂಗಳೂರಿಗಿಂದು ಪ್ರಧಾನಿ ಮೋದಿ ಆಗಮನ: ನಾಳೆ ಏರೋ ಇಂಡಿಯಾ ಉದ್ಘಾಟನೆ, ಬಿಎಂಟಿಸಿಯಿಂದ ಯಲಹಂಕಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ

Heartily welcomed Defence Minister Shri @rajnathsingh ji today at the HAL airport. He has arrived at Bengaluru to inaugurate the 5 day long #AeroIndia Show beginning tomorrow at the Yelahanka air base. pic.twitter.com/WpBseyuBH7
— Aravind Limbavali (@ArvindLBJP) February 12, 2023

ಇದಕ್ಕೂ ಮುನ್ನಾ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳುತ್ತಿರುವುದಾಗಿ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದರು. 

 

Leaving for Bengaluru to attend the #AeroIndia show. Prime Minister Shri @narendramodi will inaugurate the mega event tomorrow. Under his leadership the Govt. is working towards further strengthening India’s defence & aerospace sector, with a special focus on being self-reliant.
— Rajnath Singh (@rajnathsingh) February 12, 2023

ಏಷ್ಯಾದ ಅತಿದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ ನೀಡಲಿದ್ದಾರೆ.  ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ, ರಾಜಭವನದಲ್ಲಿ ತಂಗಲಿದ್ದಾರೆ. ಸೋಮವಾರ ರಾಜಭವನದಿಂದ ಹೆಲಿಕಾಪ್ಟರ್ ಮೂಲಕ ಯಲಹಂಕ ವಾಯುನೆಲೆಗೆ ತೆರಳುವರು. 

 

ಬೆಳಗ್ಗೆ 9-30 ರಿಂದ 11-30ರವರೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವೈಮಾನಿಕ ಪ್ರದರ್ಶನ ವೀಕ್ಷಿಸುವರು, ನಂತರ 11-45ಕ್ಕೆ ಅಲ್ಲಿಂದಲೇ ವಾಯುಪಡೆ ವಿಮಾನದಲ್ಲಿ ತ್ರಿಪುರಾಕ್ಕೆ ತೆರಳುವರು. 

LEAVE A REPLY

Please enter your comment!
Please enter your name here