Home Uncategorized ಏರ್ ಶೋ-2023: ಯಲಹಂಕ ವಾಯು ನೆಲೆ ಸುತ್ತಮುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲಿನ ಕ್ರೇನ್ ಎತ್ತರ...

ಏರ್ ಶೋ-2023: ಯಲಹಂಕ ವಾಯು ನೆಲೆ ಸುತ್ತಮುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲಿನ ಕ್ರೇನ್ ಎತ್ತರ ತಗ್ಗಿಸಲು ಸೂಚನೆ

18
0

ಯಲಹಂಕ ವಾಯು ನೆಲೆ ಸುತ್ತಮುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲಿನ ಕ್ರೇನ್ ಎತ್ತರ ತಗ್ಗಿಸಲು ಸೂಚನೆ ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಮುಂದಿನ ತಿಂಗಳ 13.02.2023 ಐದು ದಿನ ಅಂತಾರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ-2023 ವೈಮಾನಿಕ ಪ್ರದರ್ಶನ ನಡೆಯಲಿದೆ. ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಮುಂದಿನ ತಿಂಗಳ 13.02.2023 ಐದು ದಿನ ಅಂತಾರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ-2023 ವೈಮಾನಿಕ ಪ್ರದರ್ಶನ ನಡೆಯಲಿದೆ.

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯು ನೆಲೆಯಿಂದ 5.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ಫೆಬ್ರವರಿ 9 ರಿಂದ 17ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು, ಮಾಲೀಕರಿಗೆ ಸೂಚಿಸಲಾಗಿದೆ. 

ಇದನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಎರ್‌ಕ್ರಾಫ್ಟ್ ರೂಲ್ಸ್ 1937ರ ರೂಲ್ 91 ರೀತ್ಯಾ ಕ್ರಮ ವಹಿಸಲಾಗುವುದೆಂದು ನಗರ ಯೋಜನೆಯ ಜಂಟಿ ನಿರ್ದೇಶಕರಾದ(ಉತ್ತರ) ಮಂಜೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here