Home ಕರ್ನಾಟಕ ಏಳನೇ ವೇತನ ಆಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ವರದಿ ಹಸ್ತಾಂತರ

ಏಳನೇ ವೇತನ ಆಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ವರದಿ ಹಸ್ತಾಂತರ

43
0

ಬೆಂಗಳೂರು, ಮಾ.16: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತನ್ನ ವರದಿಯನ್ನು ಸಲ್ಲಿಸಿತು.

ಶನಿವಾರ ಬೆಳಗ್ಗೆ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಆಯೋಗದ ಸದಸ್ಯರಾದ ಪಿ.ಬಿ.ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ ಸೇರಿದಂತೆ ಇನ್ನಿತರು ವರದಿಯನ್ನು ಮುಖ್ಯಮಂತ್ರಿಗೆ ಹಸ್ತಾಂತರ ಮಾಡಿದರು.

ಈ ವೇಳೆ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

 

 

 

LEAVE A REPLY

Please enter your comment!
Please enter your name here