ಬೆಂಗಳೂರು: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಮೂವರು ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆ ಹಾಗೂ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ನಿರ್ದೇಶಕರಾಗಿ ಡಾ.ರವಿ ಎಂ.ಆರ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯಲಹಂಕ ವಿಭಾಗದ ವಲಯ ಆಯುಕ್ತರಾಗಿ ಕರೀ ಗೌಡ, ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿ ಪ್ರಸನ್ನ ಎಚ್. ಅವರಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ.