Home Uncategorized ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

65
0

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ… ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದೆ.

ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ಪ್ರಾಥಮಿಕ‌ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದಾರೆ ಮತ್ತು ಯಾವುದೇ ದಾಖಲೆ‌ ನೀಡಿಲ್ಲ.

ಇದನ್ನು ಓದಿ: ಸಾ.ರಾ. ಮಹೇಶ್‌ ಜೊತೆ ರಾಜಿಗೆ ಯತ್ನ: ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ

ಹೀಗಾಗಿ ಅವರ ವಿರುದ್ಧ ಇಲಾಖಾ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಅವರು ಆದೇಶ ಹೊರಡಿಸಿದ್ದಾರೆ.

ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬಂದಿತ್ತು. ಈ ವಿಚಾರವಾಗಿ ಕೆಆರ್ ನಗರ ಶಾಸಕರಾಗಿದ್ದ, ಮಾಜಿ ಸಚಿವ ಸಾ ರಾ ಮಹೇಶ್​ ಅವರು ಕೂಡ ಜಟಾಪಟಿ ನಡೆಸಿದ್ದರು. ವಿಧಾನಸೌಧದಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು.

LEAVE A REPLY

Please enter your comment!
Please enter your name here