Home Uncategorized ಒಂದು ತಿಂಗಳು ಪೂರೈಸಿದ 'ಶಕ್ತಿ' ಯೋಜನೆ; 4 ಬಸ್ ನಿಗಮಗಳ ಸಿಬ್ಬಿಂದಿಗೆ ಧನ್ಯವಾದ ತಿಳಿಸಿದ ಸಚಿವ...

ಒಂದು ತಿಂಗಳು ಪೂರೈಸಿದ 'ಶಕ್ತಿ' ಯೋಜನೆ; 4 ಬಸ್ ನಿಗಮಗಳ ಸಿಬ್ಬಿಂದಿಗೆ ಧನ್ಯವಾದ ತಿಳಿಸಿದ ಸಚಿವ ರಾಮಲಿಂಗಾ ರೆಡ್ಡಿ

12
0

ಕರ್ನಾಟಕ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ಮೊದಲು ಜಾರಿಗೆ ಬಂದಿದ್ದು ‘ಶಕ್ತಿ’ ಯೋಜನೆ. ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಶೂನ್ಯ ದರದ ಟಿಕೆಟ್ ಪಡೆದು ಮಹಿಳೆಯರು ಉಚಿತವಾಗಿ ಸಂಚಾರ ನಡೆಸುವ ಯೋಜನೆ ಇದಾಗಿದೆ. ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ಮೊದಲು ಜಾರಿಗೆ ಬಂದಿದ್ದು ‘ಶಕ್ತಿ’ ಯೋಜನೆ. ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಶೂನ್ಯ ದರದ ಟಿಕೆಟ್ ಪಡೆದು ಮಹಿಳೆಯರು ಉಚಿತವಾಗಿ ಸಂಚಾರ ನಡೆಸುವ ಯೋಜನೆ ಇದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೂನ್ 11ರಂದು ‘ಶಕ್ತಿ’ ಯೋಜನೆಗೆ ಚಾಲನೆ ನೀಡಿದ್ದರು. ಯೋಜನೆ ಒಂದು ತಿಂಗಳು ಪೂರೈಸಿದ್ದು, ಹಲವು ಟೀಕೆಗಳ ನಡುವೆಯೂ ಯೋಜನೆ ಯಶಸ್ವಿಯಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು, ಈ ಯೋಜನೆಯು ರಸ್ತೆ ಸಾರಿಗೆ ನಿಗಮದ ಚಟುವಟಿಕೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿದೆ. ಯೋಜನೆ ಯಶಸ್ವಿಗೊಳಿಸಿದ 4 ಬಸ್ ನಿಗಮಗಳ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ.

“ಸಾಮಾನ್ಯರು, ವಿಶೇಷವಾಗಿ ಮಹಿಳಾ ಪ್ರಯಾಣಿಕರು, ಪ್ರತಿದಿನ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಮೂಲಕ ಈ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಸರ್ಕಾರಿ ಬಸ್‌ಗಳು ಸಾರ್ವಜನಿಕರ ಜೀವನಾಡಿ ಮಾತ್ರವಲ್ಲದೆ ಮಹಿಳಾ ಪ್ರಯಾಣಿಕರ ಆದ್ಯತೆಯ ಸಾರಿಗೆ ವಿಧಾನವಾಗಿದೆ ಎಂಬುದನ್ನು ಇದು ನಿರೂಪಿಸಿದೆ ಎಂದು ತಿಳಿಸಿದ್ದಾರೆ.

ಪ್ರಯಾಣಿಕರ ಸಂಖ್ಯೆಯಲ್ಲಿನ ದಿಢೀರ್ ಏರಿಕೆಯನ್ನು ನಿಭಾಯಿಸಲು, ಜೂನ್‌ನಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಬಸ್ ನಿಗಮಗಳು 3,147 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸಿವೆ. KSRTC 1,500, NWKRTC 986, KSRTC 423 ಮತ್ತು BMTC 238 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

LEAVE A REPLY

Please enter your comment!
Please enter your name here