Home ಕರ್ನಾಟಕ ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆ

ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆ

52
0

ಭುವನೇಶ್ವರ : ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ. ಉಪ ಮುಖ್ಯಮಂತ್ರಿಗಳಾಗಿ ಕೆ ವಿ ಸಿಂಗ್ ದಿಯೋ ಮತ್ತು ಪ್ರವತಿ ಪರಿದಾ ಅವರನ್ನು ಆಯ್ಕೆ ಮಾಡಲಾಗಿದೆ.

ಸಿಎಂ ಆಯ್ಕೆಗೆ ವೀಕ್ಷಕರಾಗಿ ತೆರಳಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಯ್ಕೆಯ ಕುರಿತು ತಮ್ಮ ಎಕ್ಸ್‌ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

“ಒಡಿಶಾ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮೋಹನ್ ಚರಣ್ ಮಾಝಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ಸಂತೋಷವಾಗಿದೆ. ಅವರು ಪಕ್ಷದ ಯುವ ಮತ್ತು ಕ್ರಿಯಾಶೀಲ ಕಾರ್ಯಕರ್ತರಾಗಿದ್ದು, ಒಡಿಶಾದ ಹೊಸ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಪ್ರಗತಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಾರೆ. ಅವರಿಗೆ ಅನೇಕ ಅಭಿನಂದನೆಗಳು. ಇದರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳನ್ನು ನೇಮಿಸಲು ನಿರ್ಧರಿಸಲಾಗಿದೆ. ಕೆ.ವಿ.ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಅವರು ಉಪ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಸೇವೆ ಸಲ್ಲಿಸಲಿದ್ದಾರೆ. ಅವರಿಗೆ ಅಭಿನಂದನೆಗಳು!” ಎಂದು ರಾಜನಾಥ ಸಿಂಗ್‌ ಪೋಸ್ಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here