Home Uncategorized ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

37
0

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ. ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.

ಘಟನೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಸಿದ್ದರಾಮಯ್ಯ ಅವರು, ವರದಿ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here