Home Uncategorized ಕನಕಪುರದಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ!

ಕನಕಪುರದಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ!

32
0

ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇರುವ ಗಡುವು ಇನ್ನು ಕೆಲವೇ ಗಂಟೆಗಳಲ್ಲಿ ಕೊನೆಯಾಗಲಿದೆ. ಈ ನಡುವೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಕೊನೆಯ ಕ್ಷಣದಲ್ಲಿ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿವೆ. ಕನಕಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇರುವ ಗಡುವು ಇನ್ನು ಕೆಲವೇ ಗಂಟೆಗಳಲ್ಲಿ ಕೊನೆಯಾಗಲಿದೆ. ಈ ನಡುವೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಕೊನೆಯ ಕ್ಷಣದಲ್ಲಿ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿವೆ. 

ಹೊಳೆನರಸಿಪುರದಲ್ಲಿ ಬಿಜೆಪಿ ಕೊನೆ ಕ್ಷಣದಲ್ಲಿ ಹಾಸನ ಶಾಸಕ ಪ್ರೀತಮ್ ಗೌಡ ಅವರನ್ನು ರೇವಣ್ಣ ವಿರುದ್ಧ ಕಣಕ್ಕಿಳಿಸಿತ್ತು. ಈಗ ಕನಕಪುರದಲ್ಲಿ ಕಾಂಗ್ರೆಸ್ ಡಿ.ಕೆ ಸುರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. 

#BREAKING @DKSureshINC #Ramanagara MP files nomination from #Kanakpura assembly constituency. Three days ago @DKShivakumar had filed nomination. Sources: for any reason if @ECISVEEP rejects his nomination. DK Suresh will stand as candidate. #Karnataka pic.twitter.com/12uRoUFare
— Imran Khan (@KeypadGuerilla) April 20, 2023

ಏ.17 ರಂದು ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಕನಕಪುರದಿಂದ ಇಂದು (ಏ.20) ರಂದು ನಾಮಪತ್ರ ಸಲ್ಲಿಸಿದ್ದಾರೆ.
 

LEAVE A REPLY

Please enter your comment!
Please enter your name here