Home Uncategorized ಕರಾವಳಿ ಕರ್ನಾಟಕದಲ್ಲಿ ನಿಷೇಧಿತ ಡ್ರಗ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

ಕರಾವಳಿ ಕರ್ನಾಟಕದಲ್ಲಿ ನಿಷೇಧಿತ ಡ್ರಗ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

20
0

ಕರ್ನಾಟಕ-ಕೇರಳ ಗಡಿಯಲ್ಲಿ ವಾಹನ ತಪಾಸಣೆ ನಡೆಸಿದಾಗ ನಿಷೇಧಿತ ಮೆಥಾಂಫೆಟಮೈನ್ ಹೊಂದಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಂಗಳೂರು: ಕರ್ನಾಟಕ-ಕೇರಳ ಗಡಿಯಲ್ಲಿ ವಾಹನ ತಪಾಸಣೆ ನಡೆಸಿದಾಗ ನಿಷೇಧಿತ ಮೆಥಾಂಫೆಟಮೈನ್ ಹೊಂದಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆರೋಪಿಗಳನ್ನು ತಲಪಾಡಿಯ ಅಬ್ದುಲ್ ರಶೀದ್ (41) ಮತ್ತು ನಗರದ ದೇರಳಕಟ್ಟೆಯ ಪಿ ಆರಿಫ್ (40) ಎಂದು ಗುರುತಿಸಲಾಗಿದೆ.

ಕರ್ನಾಟಕ-ಕೇರಳ ಗಡಿಯ ನೆತ್ತಿಲಪದವು ಬಳಿ ಭಾನುವಾರ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 20 ಗ್ರಾಂ ಮೆಥಾಂಫೆಟಮೈನ್ ವಶಪಡಿಸಿಕೊಳ್ಳಲಾಗಿದೆ. ಅವರು ಬಳಸುತ್ತಿದ್ದ ಸ್ಕೂಟರ್ ಅನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಶಪಡಿಸಿಕೊಂಡ ಡ್ರಗ್ ಮೌಲ್ಯ 1,06,500 ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಘಟನೆಯಲ್ಲಿ ಮುಕ್ಕ ಚೆಕ್‌ಪೋಸ್ಟ್ ಬಳಿಯ ಲಾಡ್ಜ್ ಕೊಠಡಿಯಲ್ಲಿ ಜೂಜಾಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಕೃತ್ಯಕ್ಕೆ ಸಹಕರಿಸಿದ ಲಾಡ್ಜ್‌ನ ಇಬ್ಬರು ಸಿಬ್ಬಂದಿಯನ್ನೂ ಬಂಧಿಸಲಾಗಿದೆ.

ಅವರ ಬಳಿಯಿದ್ದ ನಗದು, ಮೊಬೈಲ್ ಫೋನ್‌ಗಳು, ಕಾರು ಮತ್ತು ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here