Home Uncategorized ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಸೂಚನೆ

16
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಇದನ್ನೂ ಓದಿ: ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್

ಮಳೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ @siddaramaiah ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ…
— CM of Karnataka (@CMofKarnataka) July 6, 2023

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್,  ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ. 

LEAVE A REPLY

Please enter your comment!
Please enter your name here