Home ಕರ್ನಾಟಕ ಕರ್ನಾಟಕದಲ್ಲಿ ಎಪ್ರಿಲ್ 26 ಹಾಗೂ ಮೇ 7 ರಂದು 2 ಹಂತದ ಚುನಾವಣೆ

ಕರ್ನಾಟಕದಲ್ಲಿ ಎಪ್ರಿಲ್ 26 ಹಾಗೂ ಮೇ 7 ರಂದು 2 ಹಂತದ ಚುನಾವಣೆ

43
0

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್ 26 ರಂದು ಮೊದಲ ಹಂತ ಮತ್ತು ಮೇ 7 ರಂದು 2ನೇ ಹಂತದ ಮತದಾನ ನಡೆಯಲಿದೆ. ಇದರೊಂದಿಗೆ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿರುವ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ಅಂದೇ ನಡೆಯಲಿದೆ.

ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಾಣಾ ಆಯುಕ್ತ ರಾಜೀವ್‌ ಕುಮಾರ್, ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್‌ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂನ್‌ .4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜೀವ್‌ ಕುಮಾರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here