ಹೊಸದಿಲ್ಲಿ: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್ 26 ರಂದು ಮೊದಲ ಹಂತ ಮತ್ತು ಮೇ 7 ರಂದು 2ನೇ ಹಂತದ ಮತದಾನ ನಡೆಯಲಿದೆ. ಇದರೊಂದಿಗೆ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿರುವ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ಮೇ.7 ರಂದು ನಡೆಯಲಿದೆ.
ಮೊದಲ ಹಂತ(ಎಪ್ರಿಲ್ 26)ದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳು:
ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಮೈಸೂರು-ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಚಾಮರಾಜನಗರದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.
ಎರಡನೇ ಹಂತ(ಮೇ.7)ದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳು:
ಉತ್ತರ ಕನ್ನಡ, ಚಿಕ್ಕೋಡಿ, ಬಳ್ಳಾರಿ, ಬೆಳಗಾವಿ, ಶಿವಮೊಗ್ಗ, ವಿಜಯಪುರ, ಬಾಗಲಕೋಟೆ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ದಾವಣಗೆರೆಯಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.