Home Uncategorized ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ಅಭಿನಂದನೆ

ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ಅಭಿನಂದನೆ

29
0

ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಭಿನಂದಿಸಿದ್ದಾರೆ. ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಭಿನಂದಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರೊಂದಿಗೆ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

‘ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಫಲಪ್ರದವಾದ ಅಧಿಕಾರಾವಧಿಗೆ ನನ್ನ ಶುಭಾಶಯಗಳು’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Congratulations to Shri @siddaramaiah Ji on taking oath as Karnataka CM and Shri @DKShivakumar Ji on taking oath as Deputy CM. My best wishes for a fruitful tenure.
— Narendra Modi (@narendramodi) May 20, 2023

ಅಲ್ಲದೆ, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್, 8 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು.
— Basavaraj S Bommai (@BSBommai) May 20, 2023

224 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿತ್ತು. ಫಲಿತಾಂಶ ಪ್ರಕಟಗೊಂಡ ಒಂದು ವಾರದ ನಂತರ ಸಿದ್ದರಾಮಯ್ಯ ಅವರು ಬಸವರಾಜ ಬೊಮ್ಮಾಯಿ ಅವರ ಉತ್ತರಾಧಿಕಾರಿಯಾದರು.

LEAVE A REPLY

Please enter your comment!
Please enter your name here