ಬೆಂಗಳೂರು: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ.
ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು, ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ.
ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಮಾರ್ಚ್ 16ರಿಂದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನ ಆಗಿರಲಿದೆ.
ಉಪ ಚುನಾನವಣೆ ಏಕೆ?
ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಾಗಿತ್ತು.
Schedule for Bye-Election
️Date of Poll for ACs of Goa, Karnataka, Nagaland & Tripura: 9-04-2026
️Date of Poll for ACs of Gujarat & Maharashtra: 23-04-2026
️Date of Counting: 4-05-2026#ECI #Elections pic.twitter.com/uYmMcTiUCY
— Election Commission of India (@ECISVEEP) March 15, 2026
