ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 250 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ. ಬೆಂಗಳೂರು: ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 250 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.
82 ಕೋಟಿ ರೂಪಾಯಿ ನಗದು, 57 ಕೋಟಿ ರೂ.ಮೌಲ್ಯದ ಮದ್ಯ, ರೂ. 78 ಕೋಟಿ ಮೊತ್ತದ ಬೆಳ್ಳಿ, ರೂ. 20 ಕೋಟಿ ಮೊತ್ತದ ಗಿಫ್ಟ್, 17 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೇರಿದಂತೆ ಒಟ್ಟು 250 ಕೋಟಿ ಮೊತ್ತದ ಅಕ್ರಮ ವಸ್ತು ವಶಕ್ಕೆ ಪಡೆಯಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.
ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 1,930 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮೇ 10 ರ ವಿಧಾನಸಭಾ ಚುನಾವಣೆಯ ಘೋಷಣೆಯ ಮೊದಲು ಸುಮಾರು 58 ಕೋಟಿ ರೂ ಮೌಲ್ಯದ ಅಕ್ರಮ ನಗದು, ವಸ್ತು ವಶಕ್ಕೆ ಪಡೆಯಲಾಗಿತ್ತು.
224 ಸದಸ್ಯ ಬಲದ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.