Home Uncategorized ಕರ್ನಾಟಕ ಚುನಾವಣೆ: ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ, ಆದರೆ ಷರತ್ತು ಅನ್ವಯ!: ಬಿಬಿಎಂಪಿ...

ಕರ್ನಾಟಕ ಚುನಾವಣೆ: ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ, ಆದರೆ ಷರತ್ತು ಅನ್ವಯ!: ಬಿಬಿಎಂಪಿ ಆಯುಕ್ತರ ಘೋಷಣೆ

27
0

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹತ್ವದ  ನಿರ್ಣಯ ಕೈಗೊಂಡಿದ್ದು, ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹತ್ವದ  ನಿರ್ಣಯ ಕೈಗೊಂಡಿದ್ದು, ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿದೆ.

ಮತದಾನ ದೇಶದ ಪ್ರತಿಯೊಬ್ಬರ ಹಕ್ಕು. ಪ್ರಜಾಪ್ರಭುತ್ವ ದೇಶವಾಗಿರುವ ಭಾರತದಲ್ಲಿ ತಮ್ಮ ನಾಯಕರನ್ನು ಆರಿಸುವ ಹಕ್ಕು ಅರ್ಹತೆ ಹೊಂದಿದ ಪ್ರತಿಯೊಬ್ಬ ಪ್ರಜೆಗಿದೆ. ದೇಶದಲ್ಲಿ ನಡೆಯುವ ಪ್ರತಿ ಚುನಾವಣೆಯಲ್ಲೂ ಜನರು ತಮ್ಮ ಹಕ್ಕು ಚಲಾಯಿಸಬೇಕು. ತಮಗೆ ಬೇಕಾದ ಸರ್ಕಾರ ಅಥವಾ ನಾಯಕನನ್ನು ತಾವೇ ಆರಿಸಬೇಕು.

ಇದನ್ನೂ ಓದಿ: ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ: ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ; ಚುನಾವಣಾ ಆಯೋಗ

ಆದರೆ ಹಲವು ಕಾರಣಗಳಿಂದ ಅನೇಕರು ಮತದಾನದಿಂದ ವಂಚಿತರಾಗುತ್ತಾರೆ. ಮುಖ್ಯವಾಗಿ ದಿನಗೂಲಿ ಕಾರ್ಮಿಕರು. ಮೇ 10ಯ ಬುಧವಾರ ಬಂದಿದ್ದು, ವಾರದ ಮಧ್ಯೆ ಚುನಾವಣಾ ದಿನಾಂಕ ಬಂದಿದೆ. ಹೀಗಾಗಿ ಅನೇಕರು ಮತದಾನ ಮಾಡದೇ ತಮ್ಮ ದಿನನಿತ್ಯದ ಕೆಲಸಕ್ಕೆ ತೆರಳುತ್ತಾರೆ. ಅದು ಅನಿವಾರ್ಯ ಕೂಡ. ಯಾಕಂದರೆ ಒಂದು ದಿನದ ವೇತನ ಆ ಕುಟುಂಬಕ್ಕೆ ಅನಿವಾರ್ಯವಾಗಿರುತ್ತದೆ. ಹೀಗಾಗಿ ಸಾಮಾನ್ಯವಾಗಿ ಕಾರ್ಮಿಕರು ದಿನವೂ ಕೆಲಸಗಳಿಗೆ ತೆರಳುತ್ತಾರೆ. ಇದರಿಂದ ಲಕ್ಷಾಂತರ ಜನ ಮತದಾನದಿಂದ ವಂಚಿತರಾಗುತ್ತಾರೆ. ಇಂತವರಿಗೆ ಸದ್ಯ ಸಿಹಿ ಸುದ್ದಿ ಸಿಕ್ಕಿದೆ.

ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ, ಆದರೆ ಷರತ್ತು ಅನ್ವಯ!
ಮತದಾನದ ಪ್ರಮಾಣವನ್ನು ಹೆಚ್ಚಿಸಲು ನಗರ ಜಿಲ್ಲಾ ಚುನಾವಣಾಧಿಕಾರಿ ಕೂಡ ಆಗಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ನಗರದಲ್ಲಿರುವ ಪ್ರತಿ ಐಟಿ ಬಿಟಿ ಹಾಗೂ ಗಾರ್ಮೆಂಟ್ಸ್​​​ಗೆ ಭೇಟಿ ನೀಡಿ ಕಾರ್ಮಿಕರಿಗೆ ಮತದಾನ ಮಾಡಲು ಮನವಿ ಮಾಡಿದ್ದಾರೆ. ಮತದಾನದ ದಿನ ಮತದಾನ ಮಾಡಲು ಊರಿಗೆ ತೆರಳಿದರೇ, ಸಂಬಳ ಕಟ್‌ ಆಗುತ್ತದೆ ಎಂದು ಹಲವು ಜನ ಮತದಾನ ಮಾಡಲು ತೆರಳುವುದಿಲ್ಲ. ಮೂರು ಲಕ್ಷ ಕಾರ್ಮಿಕರು ಮತದಾನ ಮಾಡುವುದರಿಂದ ವಂಚಿತರಾಗುತ್ತಿದ್ದಾರೆ. 

ಇದನ್ನೂ ಓದಿ: ರಜಾದಿನಗಳಲ್ಲೂ ಅಂಚೆ ಇಲಾಖೆ ನೌಕರರಿಂದ ಕರ್ತವ್ಯ ನಿರ್ವಹಣೆ; ಏಪ್ರಿಲ್ ಮಧ್ಯದ ವೇಳೆಗೆ 20 ಲಕ್ಷ ಚುನಾವಣಾ ಗುರುತು ಪತ್ರ ವಿತರಿಸುವ ಗುರಿ

ಹಾಗಾಗಿ, ಚುನಾವಣೆ ದಿನ ಗಾರ್ಮೆಂಟ್ಸ್ ನೌಕರರು ಸೇರಿದಂತೆ ಕಾರ್ಮಿಕರಿಗೆಲ್ಲ ಸಂಬಳ ಸಹಿತ ರಜೆ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ 3 ಲಕ್ಷ ಗಾರ್ಮೆಂಟ್ಸ್ ನೌಕರರಿದ್ದಾರೆ. ಕಾರ್ಖಾನೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ದುಡಿಯುತ್ತಿದ್ದಾರೆ. ನಗರದಲ್ಲಿ ಮತದಾನದ ಪ್ರಮಾಣ ಶೇ.50ಕ್ಕಿಂತಲೂ ಕಡಿಮೆ ಆಗುತ್ತಿದೆ. ಹೀಗಾಗಿ ಇದನ್ನ ತಪ್ಪಿಸಲು ವಾರದ ಮಧ್ಯೆ ಮತದಾನದ ದಿನಾಂಕ ಪ್ರಕಟಿಸಿದ್ದಾರೆ ಎಂದು ಹೇಳಿದರು. ಅಂತೆಯೇ ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ ಎಂದೂ ಅವರು ಸ್ಪಷ್ಟ ಪಡಿಸಿದ್ದಾರೆ.

ಮತದಾನದ ದಿನ ಬೆಂಗಳೂರಿನ ಎಲ್ಲಾ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಹಾಗೂ ಗಾರ್ಮೆಂಟ್ಸ್ ನೌಕರರಿಗೆ ಸಂಬಳ ಸಹಿತ ರಜೆ ಘೋಷಿಸಲಾಗಿದೆ. ಆದರೆ ಈ ರಜೆಯನ್ನು ದುರುಪಯೋಗ ಪಡಿಸಿಕೊಂಡು ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಚುನಾವಣಾ ಆಯೋಗದಿಂದ ಮತದಾನದ ಬಗ್ಗೆ ಹೀಗೊಂದು ಕ್ಯೂಟ್ ಪ್ರೇಮಪತ್ರ….

ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಬರಲಿದೆ. ಈಗಾಗಲೇ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಕರ್ನಾಟಕದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕೂಡ ರಾಜ್ಯಕ್ಕೆ ಸೂಕ್ತ ಸರ್ಕಾರ ಆರಿಸಲು ಮತದಾನ ಮಾಡಬೇಕಿದೆ.
 

LEAVE A REPLY

Please enter your comment!
Please enter your name here