Home Uncategorized ಕರ್ನಾಟಕ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ: ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಕರ್ನಾಟಕ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ: ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

31
0

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆಗಮಿಸುತ್ತಿದ್ದು, ನಾಳೆಯ ಕರ್ನಾಟಕ ಪ್ರವಾಸದ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆಗಮಿಸುತ್ತಿದ್ದು, ನಾಳೆಯ ಕರ್ನಾಟಕ ಪ್ರವಾಸದ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ   ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ  ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ: ಯಾದಗಿರಿಯಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ: ಪ್ರಧಾನಿ ಮೋದಿಯಿಂದ ನಾಳೆ ಉದ್ಘಾಟನೆ

ಪ್ರಧಾನಿ ಮೋದಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿಯನ್ನು ಬರಮಾಡಿಕೊಳ್ಳಲಿದ್ದಾರೆ. ಅಲ್ಲಿಂದ ಯಾದಗಿರಿ ಜಿಲ್ಲೆ ಹುಣಸಗಿ ತಲೂಕು ಕೊಡೆಕಲ್‌ ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ. 

ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅವರು ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧೂನೀಕರಣ ಕಾಮಗಾರಿ ಉದ್ಘಾಟನೆ ಮಾಡಲಿದ್ದಾರೆ.

ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು.
— Narendra Modi (@narendramodi) January 18, 2023

LEAVE A REPLY

Please enter your comment!
Please enter your name here