Home ಕರ್ನಾಟಕ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ವಜಾಗೊಳಿಸಿ ಆದೇಶ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ವಜಾಗೊಳಿಸಿ ಆದೇಶ

29
0

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದ ಡಾ. ಶಾಂತ್ ತಮ್ಮಯ್ಯ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ವಜಾಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಶುಕ್ರವಾರ ಈ ಸಂಬಂಧ ಅರಣ್ಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಅವರು ಅಧಿಸೂಚನೆ ಹೊರಡಿಸಿದ್ದು, ಮುಂದಿನ ಆದೇಶದ ವರೆಗೆ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಾಮನಿರ್ದೇಶನ ಮಾಡಿ ಆದೇಶ ಮಾಡಿದ್ದಾರೆ.

LEAVE A REPLY

Please enter your comment!
Please enter your name here