Home Uncategorized ಕರ್ನಾಟಕ ವಿಧಾನಸಭೆ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಶೇಷಚೇತನರು ಮನೆಯಿಂದಲೇ ಮತ ಚಲಾಯಿಸಲು ವ್ಯವಸ್ಥೆ!

ಕರ್ನಾಟಕ ವಿಧಾನಸಭೆ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಶೇಷಚೇತನರು ಮನೆಯಿಂದಲೇ ಮತ ಚಲಾಯಿಸಲು ವ್ಯವಸ್ಥೆ!

17
0
Advertisement
bengaluru

ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು,  ಕಳೆದ ಮೂರು ದಿನಗಳಿಂದ ರಾಜಕೀಯ ಪಕ್ಷಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಇದೇ ಮೊದಲ ಬಾರಿಗೆ, ರಾಜ್ಯದಲ್ಲಿ ಎಲ್ಲಾ 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ವಿಶೇಷ ಮತದಾರರು  ಬಯಸಿದಲ್ಲಿ, ಅವರ ಮನೆಯಿಂದಲೂ ಮತದಾನ ಮಾಡುವ ಸೌಲಭ್ಯ ಒದಗಿಸಲಿದ್ದೇವೆ. ಅಧಿಸೂಚನೆ ಹೊರಡಿಸಿದ 5 ದಿನಗಳೊಳಗೆ ಫಾರ್ಮ್ 12 ಡಿ ಲಭ್ಯವಿರುತ್ತದೆ. ಇದರಿಂದ 80 ವರ್ಷಕ್ಕೂ ಮೇಲ್ಪಟ್ಟವರು ಅಥವಾ  ವಿಶೇಷ ಚೇತನ ಮತದಾರರು ಮನೆಯಿಂದಲೇ ತಮ್ಮ ಹಕ್ಕು ಚಲಾಯಿಸಬಹುದು ಎಂದರು.For the first time, we are going to provide in Karnataka the facility to all 80+ & PwD voters, if they so desire, to vote even from their homes. There is a form 12D which will be available within 5 days of the notification so that any 80+ or PwD voter, desirous of voting from… https://t.co/8sKscfPMhM pic.twitter.com/ccn0svGbkH— ANI (@ANI) March 11, 2023

ಮೇ 24ಕ್ಕೆ ಹಾಲಿ ಸರ್ಕಾರದ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮುಂಚಿತವಾಗಿ ಚುನಾವಣೆ ಮುಗಿಸಬೇಕಾಗಿದೆ.  ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆ ಸ್ಥಾಪಿಸಲಾಗುವುದು, ಒಂದು ಮತಗಟ್ಟೆಯಲ್ಲಿ 883 ಜನರು ಮತ ಚಲಾಯಿಸಬಹುದಾಗಿದ್ದು, ನಗರ ಪ್ರದೇಶದಲ್ಲಿ 24, 063 ಮತಗಟ್ಟೆ ಸ್ಥಾಪಿಸಲಾಗುವುದು, ಒಟ್ಟು 2, 2, 73, 579 ಮತದಾರರಿದ್ದು,  ವಿಶೇಷ ಚೇತನರಿಗೆ ವೀಲ್ಹ್ ಚೇರ್ ಸೇರಿದಂತೆ ಮತದಾನಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಅವರು ತಿಳಿಸಿದರು. 
 

bengaluru bengaluru

bengaluru

LEAVE A REPLY

Please enter your comment!
Please enter your name here