Home Uncategorized ಕರ್ನಾಟಕ ವಿಧಾನಸಭೆ ಚುನಾವಣೆ: ಕೆಎಸ್ ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ!

ಕರ್ನಾಟಕ ವಿಧಾನಸಭೆ ಚುನಾವಣೆ: ಕೆಎಸ್ ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ!

17
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದ್ದಾರೆ. ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದ್ದಾರೆ.

ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲು ಪಕ್ಷ ಸೂಚಿಸುತ್ತಿದ್ದಂತೆ ಪಕ್ಷದ ಆದೇಶವನ್ನು ಈಶ್ವರಪ್ಪ ಪಾಲನೆ ಮಾಡಿದ್ದರು. ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು. ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್‍ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ.

#KarnatakaElections2023 | PM Modi held a telephonic conversation with Karnataka BJP leader and former minister KS Eshwarappa.

(Source: KS Eshwarappa) pic.twitter.com/DxUn5bTVU3
— ANI (@ANI) April 21, 2023

ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದಿದ್ದು, ಇದೇ ಕಾರಣಕ್ಕೆ ಸ್ವತಃ ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ತುಂಬ ಕಳಂಕಿತ ನಾಯಕರೇ: ಬಿಜೆಪಿ

ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದು, ಈ ವೇಳೆ ಈಶ್ವರಪ್ಪ ಮಾತನಾಡಿ, ಸಾಮಾನ್ಯ ಕಾರ್ಯಕರ್ತರೊಂದಿಗೆ ಈ ರೀತಿ ಮಾತನಾಡುತ್ತಿರುವುದು ಸಂತೋಷ ತಂದಿದೆ. ಸಂಘಟನೆ ಹಾಗೂ ನಿಮ್ಮನೊಂದಿಗೆ ಸದಾ ನಾನು ಇರುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು. 

ಇದನ್ನೂ ಓದಿ: ಸವದಿ, ಶೆಟ್ಟರ್ ಇಲ್ಲದ ಬಿಜೆಪಿ: ಲಿಂಗಾಯತ ಬ್ರ್ಯಾಂಡ್ ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಕಮಲ ನಾಯಕರು!

ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು.
 

LEAVE A REPLY

Please enter your comment!
Please enter your name here